ಈಗಾಗಲೇ ಕೋವ್ಯಾಕ್ಸಿನ್ ಲಸಿಕೆ ಪಡೆದಿರುವ ಫಲಾನುಭವಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿರುವ ಲಸಿಕಾ ಕೇಂದ್ರಗಳಿಗೆ ಆಗಮಿಸಿ ಎರಡನೇ ಡೋಸ್ ಲಸಿಕೆ ಪಡೆದುಕೊಳ್ಳಬೇಕೆಂದು ಆರ್‌ಸಿಎಚ್ಓ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ, ಧಾವಾಡ ಜಿಲ್ಲಾ ಆಸ್ಪತ್ರೆ, ಚಿಟಗುಪ್ಪಿ ಆಸ್ಪತ್ರೆ, ರಾಮಲಿಂಗೇಶ್ವರ, ನವನಗರ, ಆನಂದನಗರದ ನಗರ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಎಲ್ಲ ತಾಲೂಕಾ ಸರ್ಕಾರಿ ಆಸ್ಪತ್ರೆಗಳಲ್ಲಿ ಎರಡನೇಯ ಡೋಸ್‌ಗಾಗಿ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದೆ ಎಂದು ಅವರು ತಿಳಿಸಿದ್ದಾರೆ.
Kshetra Samachara
12/08/2021 07:50 pm