ಧಾರವಾಡ: ಕೋವಿಡ್ ಲಸಿಕೆ ಹಾಕುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರಿಗೆ ಹಾಗೂ ಅರೆ ವೈದ್ಯಕೀಯ, ಕ್ಷೇತ್ರ ಸಿಬ್ಬಂದಿಗೆ ವಾರದಲ್ಲಿ ಒಂದು ದಿನವಾದರೂ ರಜೆ ನೀಡಬೇಕು ಹಾಗೂ ಸಾರ್ವಜನಿಕರಿಂದ ಆಗುತ್ತಿರುವ ಅನಗತ್ಯ ಕಿರುಕುಳ ಮತ್ತು ದೌರ್ಜನ್ಯ ತಡೆಗಟ್ಟಲು ಪೊಲೀಸ್ ಭದ್ರತೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗಳ ಸಂಘದ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಕೊರೊನಾದ ಸಂದರ್ಭದಲ್ಲಿ ಆರೋಗ್ಯ ಸಿಬ್ಬಂದಿ ತಮ್ಮ ಕುಟುಂಬವನ್ನೂ ಲೆಕ್ಕಿಸದೇ ಕೆಲಸ ಮಾಡಿದ್ದಾರೆ. ರಜೆ ಇಲ್ಲದೇ ಕೊರೊನಾ ವ್ಯಾಕ್ಸಿನ್ ಹಾಕುವ ಕೆಲಸ ಮಾಡುತ್ತಿದ್ದಾರೆ. ಮೊನ್ನೆ ನಡೆದ ಬೃಹತ್ ಲಸಿಕಾಕರಣದಲ್ಲಿ ಎಲ್ಲ ಆರೋಗ್ಯ ಸಿಬ್ಬಂದಿ ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಸದ್ಯ ಕೊರೊನಾ ಕೇಸ್‌ಗಳು ಕಡಿಮೆ ಇದ್ದು, ವಾರದಲ್ಲಿ ಒಂದು ದಿನವಾದರೂ ಆರೋಗ್ಯ ಸಿಬ್ಬಂದಿಗೆ ರಜೆ ನೀಡಬೇಕು ಹಾಗೂ ವಿನಾಕಾರಣ ಸಾರ್ವಜನಿಕರಿಂದ ಆರೋಗ್ಯ ಸಿಬ್ಬಂದಿ ಮೇಲೆ ಆಗುತ್ತಿರುವ ದೌರ್ಜನ್ಯ ತಡೆಗಟ್ಟಲು ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಲಾಯಿತು.
Kshetra Samachara
20/09/2021 08:46 pm