ಧಾರವಾಡ : ಕರ್ನಾಟಕ ರಕ್ಷಣಾ ವೇದಿಕೆಯ ಗಜಸೇನೆ ಧಾರವಾಡ ಜಿಲ್ಲಾ ಘಟಕ ವತಿಯಿಂದ ಕರವೇ ಗಜಸೇನೆ ಅಂಬುಲೆನ್ಸ್ ಘಟಕವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಉದ್ಘಾಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ಸದಸ್ಯರೊಬ್ಬರು ಮಾತನಾಡಿ, ಕರ್ನಾಟಕ ರಕ್ಷಣಾ ವೇದಿಕೆಯ ಗಜಸೇನೆ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಾಗೂ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೋರಾಟಗಳನ್ನ ಮಾಡುತ್ತಾ ಬಂದಿದೆ. ಅದೇ ರೀತಿ ಸದ್ಯದ ಪರಿಸ್ಥಿತಿಯಲ್ಲಿ ಜನರಿಗೆ ಅನುಕೂಲವಾಗಲಿ ಎಂದು ಅಂಬುಲೆನ್ಸ್ ಘಟಕವನ್ನು ಆರಂಭಿಸಲಾಗುತ್ತಿದೆ ಕರ್ನಾಟಕ ರಕ್ಷಣಾ ವೇದಿಕೆಯ ಗಜಸೇನೆ ವತಿಯಿಂದ ಈ ಅಂಬುಲೆನ್ಸ್ ಘಟಕಕ್ಕೆ ಚಾಲನೆ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಜನರಿಗೆ ಆರೋಗ್ಯ ಸಮಸ್ಯೆ ಬಂದಾಗ ಅಂಬುಲೆನ್ಸ್ ನ ಸಹಾಯ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
Kshetra Samachara
28/10/2021 07:12 pm