ಧಾರವಾಡ: ಧಾರವಾಡದ ಶ್ರೀಸಾಯಿ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಡಾ.ಎಂ.ಎಂ.ಜೋಶಿ ಕಣ್ಣಿನ ಆಸ್ಪತ್ರೆ, ಜಿಲ್ಲಾ ಆರೋಗ್ಯ ಕೇಂದ್ರ ಹಾಗೂ ಕ್ಯಾರಕೊಪ್ಪ ಗ್ರಾಮ ಪಂಚಾಯ್ತಿ ವತಿಯಿಂದ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಕ್ಯಾರಕೊಪ್ಪ ಗ್ರಾಮದ ಸಾರ್ವಜನಿಕರಿಂದ ಈ ಶಿಬಿರಕ್ಕೆ ಉತ್ತಮ ಸ್ಪಂದನೆ ದೊರೆಯಿತು. ವೃದ್ಧರು, ಹೆಣ್ಣುಮಕ್ಕಳು ಆರೋಗ್ಯ ಶಿಬಿರಕ್ಕೆ ಬಂದು ಆರೋಗ್ಯ ತಪಾಸಣೆ ನಡೆಸಿಕೊಂಡು ಉಚಿತವಾಗಿ ಔಷಧಿಗಳನ್ನು ಪಡೆದುಕೊಂಡರು.
ಗ್ರಾಮೀಣ ಭಾಗದಲ್ಲಿರುವ ಜನ ಮುಗ್ಧರು. ಅವರು ಸದಾ ಆರೋಗ್ಯ ಕಾಪಾಡಿಕೊಳ್ಳಬೇಕು ಎಂಬ ಉದ್ದೇಶದಿಂದ ಶ್ರೀಸಾಯಿ ಕಾಲೇಜಿನ ವತಿಯಿಂದ ಹಳ್ಳಿಗಳಲ್ಲಿ ಸದಾ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುತ್ತ ಬರುತ್ತಿದೆ. ಮನಸೂರಿನಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಶಿಬಿರದಲ್ಲಿ ನೂರಾರು ಜನ ಪಾಲ್ಗೊಂಡಿದ್ದರು. ಇದೀಗ ಕ್ಯಾರಕೊಪ್ಪದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಶಿಬಿರದಲ್ಲೂ ನೂರಾರು ಜನ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಂಡರು.
ಶ್ರೀಸಾಯಿ ಕಾಲೇಜಿನ ಪ್ರಾಚಾರ್ಯ ಪ್ರೊ.ನಾಗರಾಜ ಶಿರೂರು, ಪ್ರೊ.ಎಸ್.ಬಿ.ಗಾಡಿ, ಕೆ.ಬಿ.ಮೇಟಿ, ಬಾಪು ಮೊರನಕರ ಸೇರಿದಂತೆ ಅನೇಕರು ಶಿಬಿರದಲ್ಲಿ ಪಾಲ್ಗೊಂಡಿದ್ದರು.
Kshetra Samachara
02/11/2021 08:01 pm