ಧಾರವಾಡ: ಸ್ವಾಮಿ ವಿವೇಕಾನಂದ ಯೂಥ್ ಮೂಮೆಂಟ್‌ನ 38ನೇ ಸಂಸ್ಥಾಪನಾ ದಿನ ಹಾಗೂ ವಿಶ್ವ ಏಡ್ಸ್ ದಿನದ ಅಂಗವಾಗಿ ಹುಬ್ಬಳ್ಳಿಯ ಕಿಮ್ಸ್, ಧಾರವಾಡದ ಮಾನಸಿಕ ಹಾಗೂ ನರ ವಿಜ್ಞಾನ ಸಂಸ್ಥೆ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ಎನ್‌ಎಸ್ಎಸ್ ಕೋಶದ ಸಹಭಾಗಿತ್ವದಲ್ಲಿ ಡಿಮಾನ್ಸ್‌ನಲ್ಲಿ ಶತಕ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಕೋವಿಡ್ ನಂತಹ ಸಂದರ್ಭದಲ್ಲಿ ಅನೇಕರು ರಕ್ತದ ಕೊರತೆಯಿಂದ ಅಸುನೀಗಿದ್ದಾರೆ. ಈ ಶಿಬಿರ ಅಂತಹ ಸಹಸ್ರಾರು ಜೀವಗಳನ್ನು ಕಾಪಾಡುವ ಸಂಜೀವಿನಿಯಾಗಲಿ ಎಂದರು.
ಡಿಮಾನ್ಸ್‌ನ ಮಾನಸಿಕ ಶಾಸ್ತ್ರ ವಿಭಾಗದ ಮುಖ್ಯಸ್ಥ ಆದ ಡಾ.ಕೆ.ರಾಮಪ್ರಸಾದ್, ಕರ್ನಾಟಕ ವಿಶ್ವವಿದ್ಯಾಲಯ ಎನ್‌ಎಸ್ಎಸ್ ಕೋಶದ ಸಂಯೋಜನಾಧಿಕಾರಿ ಡಾ.ಎಂ.ಬಿ.ದಳಪತಿ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Kshetra Samachara
01/12/2021 10:49 pm