ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿಗಿಂತ ಕೆಳಗೆ ಇಳಿಯುವಂತೆ ಕಾಣುತ್ತಿಲ್ಲ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 1,044 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈವರೆಗೂ ಒಟ್ಟು 80,274 ಜನರಿಗೆ ಸೋಂಕು ದೃಢಪಟ್ಟಿದೆ.
ಸೋಂಕಿನಿಂದ ಇಂದು 1,051 ಮಂದಿ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈವರೆಗೂ 72,514 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು, ಈವರೆಗೂ ಒಟ್ಟು 1,333 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 6,425 ಸಕ್ರಿಯ ಪ್ರಕರಣಗಳಿವೆ.
Kshetra Samachara
31/01/2022 08:01 pm