ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪಬ್ಲಿಕ್ ನೆಕ್ಸ್ಟ್ ಮಾಧ್ಯಮ ಸಹಭಾಗಿತ್ವದಲ್ಲಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಕ್ಯಾನ್ಸರ್ ರೋಗದ ಚಿಕಿತ್ಸೆ ಜೊತೆಗೆ ಜನರಲ್ಲಿರುವ ಭಯವನ್ನು ದೂರ ಮಾಡುವ ಸದುದ್ದೇಶದಿಂದ ಹುಬ್ಬಳ್ಳಿ ರೌಂಡ್ ಟೇಬಲ್ 37, ಹುಬ್ಬಳ್ಳಿ ಲೇಡಿಸ್ ಸರ್ಕಲ್ 45 ವತಿಯಿಂದ ನಾಳೆ ಸ್ಕೇಟಿಂಗ್ ಮೂಲಕ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ವಿವೇಕ ಪಾಟೀಲ ಹಾಗೂ ಅಕ್ಷಯ ಸೂರ್ಯವಂಶಿ, ಸ್ಕೇಟಿಂಗ್ ಮೂಲಕ ಕಿಮ್ಸ್ ಆವರಣದಿಂದ ರೇಡಾನ್ ಆಸ್ಪತ್ರೆಯವರೆಗೆ ಕ್ಯಾನ್ಸರ್ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ರೆಡಾನ್ ಆಸ್ಪತ್ರೆಯು ಕ್ಯಾನ್ಸರ್ ಕುರಿತಾದ ಚಿಕಿತ್ಸೆ ಹಾಗೂ ಆರೋಗ್ಯದ ಕಾಳಜಿ ಕುರಿತು ಜನರಲ್ಲಿ ಮನವರಿಕೆ ಮಾಡುವ ಸದುದ್ದೇಶದಿಂದ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಇನ್ನೂ ಫೆಬ್ರವರಿ 06 ಜಾಗತಿಕ ಕ್ಯಾನ್ಸರ್ ದಿನವಾಗಿದೆ. ನಮ್ಮ ದೇಶದಲ್ಲಿ ಕ್ಯಾನ್ಸರ್ ರೋಗದ ಅರಿವು ಕಡಿಮೆಯಾಗಿದೆ. ಅಲ್ಲದೆ ಭಾರತದಲ್ಲಿ ಸಾಕಷ್ಟು ಜನರು ಮಾದಕ ಪದಾರ್ಥಗಳ ಸೇವನೆಯಿಂದ ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದಾರೆ. ಅಲ್ಲದೇ ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿದ್ದಾರೆ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಿ ಹಾಗೂ ಕ್ಯಾನ್ಸರ್ ರೋಗ ನಿಯಂತ್ರಣದ ಬಗ್ಗೆ ಸಾಮಾಜಿಕ ಕಾಳಜಿ ವಹಿಸುವ ಕಾರ್ಯವನ್ನು ರೆಡಾನ್ ಆಸ್ಪತ್ರೆಯ ಮಾಡುತ್ತಿದೆ ಎಂದು ಅವರು ಹೇಳಿದರು.
Kshetra Samachara
05/02/2022 07:50 pm