ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ವ್ಯಾಕ್ಸಿನ್: ಲಸಿಕಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

ಧಾರವಾಡ: ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಆರಂಭಿಸಲಾದ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಚಾಲನೆ ನೀಡಿದ್ರು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ಇಂದಿನಿಂದ ಜಿಲ್ಲೆಯ 12 ರಿಂದ 14 ವರ್ಷದ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ನೀಡುವ ಅಭಿಯಾನವನ್ನು ಆರಂಭಿಸಲಾಗಿದೆ. ಜಿಲ್ಲೆಯ 12 ರಿಂದ 14 ವರ್ಷದೊಳಗಿನ ಪ್ರಸ್ತುತ 72,695 ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಲಸಿಕಾ ಅಭಿಯಾನಕ್ಕೆ ಅಗತ್ಯವಿರುವ ಆರೋಗ್ಯ ಸಿಬ್ಬಂದಿ ಹಾಗೂ ಇತರ ಸೌಲಭ್ಯಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸಿಕೊಂಡಿದೆ ಅಂದ್ರು.

ಹಾಗೇ ಅಭಿಯಾನ ಯಶಸ್ವಿಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಣ ಸಂಸ್ಥೆಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಶಾಲಾ ಮುಖ್ಯಸ್ಥರು ತಮ್ಮ ಶಾಲೆಯಲ್ಲಿ ಕಲಿಯುತ್ತಿರುವ 12 ರಿಂದ 14 ವರ್ಷದೊಳಗಿನ ಮಕ್ಕಳ ಮಾಹಿತಿಯನ್ನು ಮತ್ತು ಅವರ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ ಪಡೆದುಕೊಂಡು ಸಿದ್ಧಪಡಿಸಿಕೊಳ್ಳಬೇಕು. ಲಸಿಕೆ ನೀಡಲು ಆಗಮಿಸುವ ಕುರಿತು ಆರೋಗ್ಯ ಇಲಾಖೆ ನೀಡುವ ದಿನಗಳಂದು ಖುದ್ದು ಹಾಜರಿದ್ದು ಸಹಕಾರ ನೀಡಬೇಕೆಂದು ಸೂಚಿಸಿದರು.

ಜಿಲ್ಲಾ ಆರ್‌ಸಿಎಚ್ಓ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಸಿ.ಕರಿಗೌಡರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಕುಮಾರ ಮಾನಕರ ಸೇರಿದಂತೆ ಇತರರು ಇದ್ದರು.

Edited By :
Kshetra Samachara

Kshetra Samachara

16/03/2022 03:05 pm

Cinque Terre

46.7 K

Cinque Terre

2

ಸಂಬಂಧಿತ ಸುದ್ದಿ