ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕೊರೊನಾ ವಾರಿಯರ್ಸ್‌ಗಳು ಇನ್ಮುಂದೆ ಕೆಲಸಕ್ಕೆ ಬರಬಾರದಂತೆ

ಧಾರವಾಡ: ಕೊರೊನಾ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಕೆಲಸಕ್ಕೆ ತೆಗೆದುಕೊಂಡಿದ್ದ ಕೊರೊನಾ ವಾರಿಯರ್ಸ್‌ಗಳು ಈಗ ಬೀದಿಗೆ ಬಂದಂತೆ ಆಗಿದೆ.

ಧಾರವಾಡ ಜಿಲ್ಲೆಯಲ್ಲಿ ಇರುವ ನೂರಕ್ಕೂ ಹೆಚ್ಚು ಆರೋಗ್ಯ ಇಲಾಖೆಯ ಕೊರೊನಾ ವಾರಿಯರ್ಸ್‌ಗಳಿಗೆ ನಾಳೆಯಿಂದ ಕೆಲಸಕ್ಕೆ ಬರದಂತೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ ಕೊರೊನಾ ವಾರಿಯರ್ಸ್‌ಗಳು, ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ತಮ್ಮನ್ನು ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸದ್ಯ ಎರಡು ವರ್ಷಗಳಿಂದ ಸರ್ಕಾರದ ಭರವಸೆ ಮೇಲೆ ನಾವು ಜೀವನ ನಡೆಸುತ್ತ ಬಂದಿದ್ದು, ಈಗ ಇಲಾಖೆ ನಮ್ಮನ್ನು ಕೆಲಸದಿಂದ ತೆಗೆದರೆ, ನಮ್ಮ ಜೀವನ ಬೀದಿಗೆ ಬರುತ್ತದೆ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ತಮ್ಮ ಮೇಲೆಯೇ ಕುಟುಂಬಗಳು ಅವಲಂಭಿತವಾಗಿದ್ದು, ಅದನ್ನು ಸರ್ಕಾರ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಸದ್ಯ ಆರೋಗ್ಯ ಇಲಾಖೆ ನೀಡಿದ ಸೂಚನೆಯಿಂದಾಗಿ ಇದೀಗ ಕೊರೊನಾ ವಾರಿಯರ್ಸ್‌ಗಳಿಗೆ ದಿಕ್ಕು ತೋಚದಂತಾಗಿದೆ. ಇಲಾಖೆ ಹಾಗೂ ಸರ್ಕಾರ ಇವರ ಬೇಡಿಕೆಗೆ ಯಾವ ರೀತಿ ಸ್ಪಂದನೆ ನೀಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Edited By : Manjunath H D
Kshetra Samachara

Kshetra Samachara

30/03/2022 04:02 pm

Cinque Terre

14.16 K

Cinque Terre

4

ಸಂಬಂಧಿತ ಸುದ್ದಿ