ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮದ ಮಾರುತಿ ದೇವಸ್ಥಾನದದಲ್ಲಿ ಹುಬ್ಬಳ್ಳಿ ನಗರದ ಸುಚಿರಾಯ ಆಸ್ಪತ್ರೆಯವರು ಕಾರ್ಮಿಕ ಕಾರ್ಡ್ ಹೊಂದಿದ ಕುಟುಂಬಕ್ಕೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿ ಆರೋಗ್ಯ ತಪಾಸಣೆ ಜೊತೆ ಉಚಿತ ಚಿಕಿತ್ಸೆ ಔಷಧಿಗಳನ್ನು ವಿತರಣೆ ಮಾಡಿದರು.
ಇನ್ನೂ ಹೆಚ್ಚಿನ ಚಿಕಿತ್ಸೆಗೆ ಕಾರ್ಮಿಕ ಇಲಾಖೆಯ ಅನುಮೋದನೆ ಪಡೆದು ಆಸ್ಪತ್ರೆಗೆ ಹೋಗಲು ವ್ಯವಸ್ಥೆ ಮಾಡುವುದಾಗಿ ಸುಚಿರಾಯ ಆಸ್ಪತ್ರೆ ಸಿಬ್ಬಂದಿಗಳು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸರ್ವ ಸದಸ್ಯರು ಆಸ್ಪತ್ರೆ ಸಿಬ್ಬಂದಿಯವರು ರೋಗಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Kshetra Samachara
05/05/2022 04:09 pm