ಹುಬ್ಬಳ್ಳಿ: ಆಯುರ್ವೇದ ಶಲ್ಯ, ಶಾಲಕ್ಯ ಮತ್ತು ಸ್ತ್ರೀರೋಗ ಮತ್ತು ಪ್ರಸೂತಿ ತಂತ್ರ ವಿಭಾಗಗಳಲ್ಲಿ ಶಸ್ತ್ರಚಿಕಿತ್ಸೆ ಮತ್ತು ಪ್ರಸೂತಿ ತಂತ್ರ ವಿಭಾಗಗಳಲ್ಲಿ ಶಸ್ತ್ರಚಿಕಿತ್ಸೆ ಮತ್ತು ಪಂಚಕರ್ಮ ಚಿಕಿತ್ಸೆಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಆರೋಗ್ಯ ಭಾರತಿ ಕರ್ನಾಟಕ ವತಿಯಿಂದ ಮೇ.14&15 ರಂದು ಹುಬ್ಬಳ್ಳಿಯ ಹೆಗ್ಗೇರಿಯಲ್ಲಿನ ಆಯುರ್ವೇದ ಮಹಾವಿದ್ಯಾಲಯದ ವೈದ್ಯ ಗುರು ಹಲಸಿಕರ ವೇದಿಕೆಯಲ್ಲಿ ಆಯೋಜಿಸಲಾಗಿದೆ ಎಂದು ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿ ಅಧ್ಯಕ್ಷ ಗೋವಿಂದ ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಆಯುರ್ವೇದ ಮಹಾವಿದ್ಯಾಲಯ ಹುಬ್ಬಳ್ಳಿ , ಸಂಜೀವಿನಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಹುಬ್ಬಳ್ಳಿ, ಜೈನ್ ಎಜಿಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ವರೂರು, ಸಿಬಿ ಗುತ್ತಲ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಧಾರವಾಡ, ಮಹಾಗಣಪತಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಧಾರವಾಡದ ಸಹಯೋಗದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಡಿಯಲ್ಲಿ ಕೌಶಲ್ಯ ಭಾರತಿ-2022 ಆಯೋಜಿಸಲಾಗಿದೆ ಎಂದರು.
ಮೇ.14 ರಂದು ಬೆಳಿಗ್ಗೆ 10.30 ಕ್ಕೆ ಆರೋಗ್ಯ ಭಾರತಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಡಾ.ಅಶೋಕಕುಮಾರ ವಾರ್ಷಣೇಯ ಉದ್ಘಾಟನೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಅತಿಥಿಗಳಾಗಿ ಆರ್ ಜಿಯುಹೆಚ್ ಎಸ್ ನ ಸಿಂಡಿಕೇಟ್ ಸದಸ್ಯ ಡಾ.ಗಜಾನನ ಹೆಗಡೆ ಆಗಮಿಸಲಿದ್ದು, ಅಧ್ಯಕ್ಷತೆಯನ್ನು ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿಯ ಅಧ್ಯಕ್ಷ ಗೋವಿಂದ ಜೋಶಿ ವಹಿಸಲಿದ್ದಾರೆ. ಮೇ.15 ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದರು.
Kshetra Samachara
10/05/2022 01:06 pm