ಧಾರವಾಡ: ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಕಾರ್ಯಾಲಯ ಹಾಗೂ ತಾಲೂಕು ಆರೋಗ್ಯಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿಂದು ಡೆಂಗೆ ತಡೆಗಟ್ಟಬಹುದು ಬನ್ನಿ ಎಲ್ಲರೂ ಕೈಜೋಡಿಸೋಣ ಎಂಬ ಧ್ಯೇಯವಾಕ್ಯದೊಂದಿಗೆ ರಾಷ್ಟ್ರೀಯ ಡೆಂಗೆ ದಿನಾಚರಣೆ ಅಂಗಾವಾಗಿ ಜಾಥಾ ಜರುಗಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಸಿ.ಕರಿಗೌಡರ ಮಾತನಾಡಿ, ಡೆಂಗೆ ಮಾರಣಾಂತಿಕ ಕಾಯಿಲೆ. ಏಡಿಸ್ ಈಜಿಪ್ಟಿ ಎಂಬ ಸೊಳ್ಳೆಗಳಿಂದ ಹರಡುತ್ತದೆ. ಏಪ್ರಿಲ್ 2021 ರಿಂದ ಮಾರ್ಚ್ 2022 ರವೆರೆಗೆ ಜಿಲ್ಲೆಯಲ್ಲಿ 13 ಡೆಂಗೆ ಪ್ರಕರಣಗಳು ಕಂಡುಬಂದಿದ್ದು ಯಾವುದೇ ಮರಣಗಳಾಗಿಲ್ಲ. ಜಿಲ್ಲೆಯಲ್ಲಿ ಇದುವರೆಗೂ ಅಂದರೆ ಪ್ರಸಕ್ತ ಸಾಲಿನ ಮಾರ್ಚ್ 2022 ರಿಂದ ಈವರೆಗೆ ಡೆಂಗೆ ಪ್ರಕರಣಗಳು ವರದಿಯಾಗಿಲ್ಲ. ಜನ ಜಾಗೃತಿ ಮೂಡಿಸುವುದು, ಸೊಳ್ಳೆಗಳ ತಾಣವನ್ನು ನಾಶಮಾಡುವುದು. ಜನರು ಸೊಳ್ಳೆಗಳ ಕಡಿತದಿಂದ ನಿರ್ಲಕ್ಷ್ಯ ತೋರದೆ ಎಚ್ಚರಿಸುವುದು ಜಾಥಾದ ಉದ್ದೇಶವಾಗಿದೆ ಎಂದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಕುಮಾರ ಮಾನಕರ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ಶಶಿ ಪಾಟೀಲ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಬಿ.ನಿಂಬಣ್ಣವರ, ಜಿಲ್ಲಾ ಆರ್.ಸಿ.ಎಚ್.ಓ. ಡಾ.ಎಸ್.ಎಂ. ಹೊನಕೇರಿ, ಪ್ರಭಾರಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಸ್.ಬಿ. ಕಳಸೂರಮಠ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಮಂಜುನಾಥ ಎಸ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್. ಪಾತ್ರೋಟ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ರೇಖಾ ಬಾಡಗಿ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.
ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚರಿಸಿತು. ಅರೆವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Kshetra Samachara
16/05/2022 11:53 am