ಅಳ್ನಾವರ:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಮಾಹಾವಿದ್ಯಾಲಯ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸ್ವಾಸ್ಥ್ಯ ಆರೋಗ್ಯಕ್ಕಾಗಿ ಯೋಗ ತರಬೇತಿ ಶಿಬಿರ ಉದ್ಘಾಟನೆ ಸಮಾರಂಭ ಜರುಗಿತು.
ಕಾರ್ಯಕ್ರಮದ ಉದ್ಘಾಟಕರಾಗಿ ಅಳ್ನಾವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ:ಎನ್,ಎಸ್ ಪಾಟೀಲ್ ಮಾತನಾಡುತ್ತ,ಇವತ್ತಿನ ಆಧುನಿಕ ಜೀವನ ಶೈಲಿಯ ಒತ್ತಡದ ಬದುಕಿನಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಕಷ್ಟದ ಕೆಲಸವಾದರೂ ಆಟ,ಯೋಗ,ವಿವಿಧ ಆಸನದ ಭಂಗಿಗಳು,ಸೂರ್ಯ ನಮಸ್ಕಾರ,ಪ್ರಾಣಾಯಾಮ, ಧ್ಯಾನ ಮತ್ತು ಕ್ರಿಯೆಗಳನ್ನ ದಿನನಿತ್ಯದ ಜೀವನ ಶೈಲಿಯಲ್ಲಿ ರೂಪಿಸಿಕೊಳ್ಳ ಬೇಕು ಎಂದು ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶ್ರೀಮತಿ ಅನುಮಪ ಢವಳೇ ವಹಿಸಿದ್ದರು.ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀಪಾಲ ಕುರಕುರಿ ಮಾತನಾಡಿದರು.
Kshetra Samachara
15/06/2022 03:18 pm