ಹುಬ್ಬಳ್ಳಿ: ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ 'ಸ್ವಾತಂತ್ರ್ಯದ ಅಮೃತ ಮಹೋತ್ಸವ' ಅಂಗವಾಗಿ, ದೇಶಾದ್ಯಂತ 25 ದಿನಗಳ ಕಾಲ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಬೂಸ್ಟರ್ ಡೋಸ್ ನೀಡುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಅದೇ ರೀತಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಶ್ರೀಧರ್ ದಂಡೆಪ್ಪನವರ, ಡಾ. ಪ್ರಕಾಶ ನರಗುಂದ ಅವರ ನೇತೃತ್ವದಲ್ಲಿ, ನಗರದ ಬದಾಮಿ ನಗರದ ಬಾಲ ಮಂದಿರದಲ್ಲಿ ಸಾರ್ವಜನಿಕರಿಗೆ ಬೂಸ್ಟರ್ ಡೋಸ್ ಹಾಕಿದರು.
ಇಂದು ಬೆಳಗ್ಗೆಯಿಂದ ಲಸಿಕಾ ಅಭಿಯಾನ ಆರಂಭವಾಗಿದ್ದು, ವಾರದಲ್ಲಿ ಸೋಮವಾರ, ಬುಧವಾರ, ಶುಕ್ರವಾರ ದಿನಗಳಂದು ಧಾರವಾಡ ಜಿಲ್ಲಾಧ್ಯಂತ ಕೋವಿಡ್ ಲಸಿಕೆಯನ್ನು ಹಾಕಲು ಮುಂದಾಗಿದ್ದಾರೆ. ಅದೇ ರೀತಿ ಜನರು ಕೂಡ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಿದ್ದಾರೆ.
Kshetra Samachara
20/07/2022 11:40 am