ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಲ್ಲಿ ಕೋವಿಡ್‌ನಿಂದ ಓರ್ವ ವ್ಯಕ್ತಿ ಸಾವು

ಧಾರವಾಡ: ಕೋವಿಡ್ ಸೋಂಕಿನಿಂದ ಹುಬ್ಬಳ್ಳಿಯ ಗಾಂಧಿನಗರದ 77 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಂದಲೂ ಅವರು ಬಳಲುತ್ತಿದ್ದರು. ಜುಲೈ 20 ರಂದು ಕೋವಿಡ್ ಸೋಂಕು ದೃಢಪಟ್ಟು ಚಿಕಿತ್ಸೆಗಾಗಿ ಸುಚಿರಾಯು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 24 ಅವರು ಮೃತಪಟ್ಟಿದ್ದಾರೆ.

ಜಿಲ್ಲೆಯ ಜನತೆ ಸಾಮಾಜಿಕ ಅಂತರ, ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಆರೋಗ್ಯ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

26/07/2022 08:20 pm

Cinque Terre

11.31 K

Cinque Terre

0

ಸಂಬಂಧಿತ ಸುದ್ದಿ