ಧಾರವಾಡ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಚರಂಡಿಗಳು ತುಂಬಿ ಹರಿಯುತ್ತಿರುವ ಪರಿಣಾಮ ಪ್ರಾಣಿಗಳಿಗೂ ಸಂಕಷ್ಟ ಬಂದೊದಗಿದೆ. ರಸ್ತೆ ಯಾವುದು, ಚರಂಡಿ ಯಾವುದು ಎಂದು ಗೊತ್ತಾಗದೇ ಚರಂಡಿಯಲ್ಲಿ ಹಸು ಬಿದ್ದು ನರಳಾಡಿದ ಘಟನೆ ಜಯನಗರ 4 ನೇ ಕ್ರಾಸ್ ನಲ್ಲಿ ನಡೆದಿದೆ.
ಜಯನಗರದಲ್ಲಿ ರಸ್ತೆ ಪಕ್ಕದಲ್ಲಿ ಹೋಗುತ್ತಿದ್ದ ಹಸುವೊಂದು ನಿನ್ನೆ ತಡ ರಾತ್ರಿ ರಸ್ತೆ ಕಾಣದೆ ಚರಂಡಿಯಲ್ಲಿ ಬಿದ್ದಿದೆ.
ಇಂದು ಬೆಳಗ್ಗೆ ಒದ್ದಾಡುತ್ತಿದ್ದ ಹಸುವನ್ನು ಕಂಡ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ. ತಕ್ಷಣ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಸು ರಕ್ಷಣೆ ಮಾಡಿದ್ದಾರೆ. ಚರಂಡಿಯಿಂದ ಮೇಲೆ ಎತ್ತುತ್ತಿದಂತೆ ಹಸು ಅಲ್ಲಿಂದ ಕಾಲ್ಕಿತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯ ಕಾರ್ಯಕ್ಕೆ ಸ್ಥಳೀಯರಿಂದ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Kshetra Samachara
15/10/2020 10:01 pm