ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಮ್ಮಿಗಟ್ಟಿ ಬಳಿ ಬೈಕ್ ಗಳ ನಡುವೆ ಅಪಘಾತ ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಸವಾರ ಸಾವು.

ಧಾರವಾಡ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಇನ್ನೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ನಿನ್ನೇ ಮಧ್ಯಾಹ್ನ ಮಮ್ಮಿಗಟ್ಟಿ ಬಳಿಯಲ್ಲಿ ಬೈಕ್‌ಗಳ ಅಪಘಾತವಾಗಿ ಬೈಲಹೊಂಗಲ ಮೂಲದ ಬಸಯ್ಯ ಸ್ಥಳದಲ್ಲೇ ಮೃತಪಟ್ಟಿದ್ದ,ಆದ್ರೆ ಗಂಭೀರವಾಗಿ ಗಾಯಗೊಂಡಿದ್ದ ಹುಬ್ಬಳ್ಳಿಯ ಸುಭಾಸ ನಗರದ ಪ್ರತೀಕ ನನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲು ಮಾಡಲಾಗಿತ್ತು ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮಧ್ಯರಾತ್ರಿ ಪ್ರತೀಕ ಮೃತಪಟ್ಟಿದ್ದಾನೆ.

ಸಧ್ಯ ಶವವನ್ನು ಗರಗ ಠಾಣೆಯ ಪೊಲೀಸರು ಹುಬ್ಬಳ್ಳಿಯ ಕಿಮ್ಸ್ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಯನ್ನು ಮಾಡಿಸಿ ಕುಟುಂಬಸ್ಥರಿಗೆ ಶವವನ್ನು ಹಸ್ತಾಂತರ ಮಾಡಿದ್ದು, ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Somashekar
Kshetra Samachara

Kshetra Samachara

01/08/2022 05:22 pm

Cinque Terre

43.75 K

Cinque Terre

2

ಸಂಬಂಧಿತ ಸುದ್ದಿ