ಹುಬ್ಬಳ್ಳಿ: ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವರೂರು ಬಳಿಯಲ್ಲಿ ನಿನ್ನೇ ಮಧ್ಯರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಇಂದು ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ ಮೂರಕ್ಕೇ ಏರಿಕೆಯಾಗಿದೆ.
ನಿನ್ನೇ ಮಧ್ಯರಾತ್ರಿ ದಾವಣಗೆರೆ ಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಹೋಂಡಾ ಅಮೇಜ್ ಕಾರು ವರೂರು ಬಳಿಯ ಗಣೇಶ ಹೊಟೇಲ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಓರ್ವ ಮಹಿಳೆ ನಿನ್ನೇ ರಾತ್ರಿಯೇ ಕಿಮ್ಸ್ ನಲ್ಲಿ ಮೃತಪಟ್ಟಿದ್ದಳು, ಗಂಭೀರವಾಗಿ ಗಾಯಗೊಂಡಿದ್ದ ಇನ್ನೊಬ್ಬ ಇಂದು ಬೆಳಗಿನ ಜಾವ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದು ಇದೀಗ ಮೃತಪಟ್ಟವರ ಸಂಖ್ಯೆ ಮೂರಕ್ಕೇಏರಿಕೆಯಾಗಿದೆ.
ಮೃತಪಟ್ಟವರನ್ನು ದಾವಣಗೆರೆ ಮೂಲದ ಸೋಹೆಲ್, ಶಾರುಖ್, ಸುಶೀಲಾ, ಎಂದು ತಿಳಿದು ಬಂದಿದ್ದು ಮೂವರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಶವಾಗಾರಕ್ಕೆ ರವಾನಿಸಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
14/09/2022 06:25 pm