ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾದ ಮಹಿಳೆಯರು

ಹುಬ್ಬಳ್ಳಿ: ಇಲ್ಲಿನ ಉಣಕಲ ನಗರ ಹಾಗೂ ರಾಷ್ಟ್ರೋತ್ಥಾನ ರಕ್ತ ಭಂಡಾರ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಉಣಕಲ ಶ್ರೀನಗರದ ಶ್ರೀಗಣಪತಿ ದೇವಸ್ಥಾನದಲ್ಲಿ ರಕ್ತದಾನ ಶಿಬಿರ ನಡೆಸಲಾಯಿತು.ವಿಶೇಷವಾಗಿ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಮಾಡಿದರು.

ಪ್ರಸ್ತುತ ದಿನಮಾನಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿದ್ದು,ಇದನ್ನು ಮನಗಂಡ ಯುವಕರು ರಕ್ತದ ಅವಶ್ಯಕತೆ ಇರುವ ರೋಗಿಗಳಿಗೆ ಸಮರ್ಪಕವಾದ ರಕ್ತ ದೊರೆಯಲಿ ಎಂಬುವಂತ ಸದುದ್ದೇಶದಿಂದ ರಕ್ತದಾನಕ್ಕೆ ಮುಂದಾಗಿರುವುದು ವಿಶೇಷವಾಗಿದೆ. ಇನ್ನೂ ಮಹಿಳೆಯರು ಕೂಡ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ್ದು,ಶಿಬಿರಕ್ಕೆ ಹೆಚ್ಚಿನ ಮೆರುಗು ನೀಡಿದೆ.

Edited By : Manjunath H D
Kshetra Samachara

Kshetra Samachara

23/11/2020 12:07 pm

Cinque Terre

22.85 K

Cinque Terre

0

ಸಂಬಂಧಿತ ಸುದ್ದಿ