ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದ ನಾಲ್ವರಿಗೆ ಚಿನ್ನದ ಪದಕ: ಯಾರಿಗೆ ಗೊತ್ತಾ?

ಧಾರವಾಡ: ರಾಜ್ಯದ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ಕಾರ್ಯದಲ್ಲಿ ಗಣನೀಯ ಸಾಧನೆ ಮಾಡಿದ ಧಾರವಾಡ ಜಿಲ್ಲೆಯ ನಾಲ್ವರು ಮುಖ್ಯಮಂತ್ರಿಗಳ ಪದಕಗಳಿಗೆ ಭಾಜನರಾಗಿದ್ದಾರೆ.

ಉಪ ವಲಯ ಅರಣ್ಯಾಧಿಕಾರಿಗಳಾದ ಎಮ್.ಡಿ.ಲಮಾಣಿ, ಲಕ್ಷ್ಮಣ ಕಟ್ಟಿಮನಿ, ಅರಣ್ಯ ರಕ್ಷಕರಾದ ಉಮೇಶ ಕಡಿ ಮತ್ತು ಗಿರಿಧರ್ ಅಗರ್ವಾಲೆಯವರಿಗೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು.

ಧಾರವಾಡ ಅರಣ್ಯ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಈ ಸಾಧನೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ ಹಾಗೂ ಮತ್ತಿತರ ಅಧಿಕಾರಿಗಳು, ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

25/11/2020 08:03 pm

Cinque Terre

21.94 K

Cinque Terre

1

ಸಂಬಂಧಿತ ಸುದ್ದಿ