ಹುಬ್ಬಳ್ಳಿ: ಅರವತ್ತರ ದಶಕದಲ್ಲಿ ಕೇಂದ್ರ ಬಸ್ ನಿಲ್ದಾಣವಾಗಿ ನಂತರ, ವಾಣಿಜ್ಯನಗರಿಯ ವ್ಯಾಪಾರಿ ಕೇಂದ್ರವಾಗಿದ್ದ ಜನತಾ ಬಜಾರ್ ಇತಿಹಾಸದ ಗರ್ಭ ಸೇರುತ್ತಿದ್ದೆ. ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ಪ್ರಾರಂಭಗೊಂಡಿರುವ ಹಿನ್ನೆಲೆಯಲ್ಲಿ ಕಿಷ್ಕಿಂದೆಯಾಗಿದ್ದ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಸುವ ಮೂಲಕ ಜನತಾ ಬಜಾರ್ ಕೆಡವುವ ಕಾರ್ಯಾಚರಣೆ ಮೂರನೇ ದಿನವೂ ಮುಂದುವರೆಯಿತು.
ಬೆಳ್ಳಂಬೆಳಿಗ್ಗೆ ಜೆಸಿಬಿ ಸದ್ದು ಕೇಳಿ ಬರುತ್ತಿದ್ದು,ಹುಬ್ಬಳ್ಳಿ ಹೃದಯ ಭಾಗದಲ್ಲಿರುವ ಜನತಾ ಬಜಾರ್ ಗೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 18.36 ಕೋಟಿ ಅನುದಾನವನ್ನು ಮೀಸಲಿಟ್ಟಿದ್ದು,ನವೀಕರಣಗೊಳಿಸುವ ಕಾಮಗಾರಿ ಭರದಿಂದ ಸಾಗಿದೆ.
Kshetra Samachara
27/11/2020 12:49 pm