ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಹತ್ತು ಶಾಲೆ ದತ್ತು ಪಡೆದುಕೊಳ್ಳಲು ಮುಂದಾದ ಎಸ್ ಡಿಎಂ

ಧಾರವಾಡ: ಪ್ರಸಕ್ತ ವರ್ಷ ಧಾರವಾಡದ ಧರ್ಮಸ್ಥಳ ‌ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಎರಡನೇ ವರ್ಷಾಚರಣೆಯನ್ನು ಮಾಡುವ ಬದಲಿಗೆ ಹತ್ತು ಶಾಲೆಗಳನ್ನು ದತ್ತು ಪಡೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಕುಲಪತಿ ಡಾ.ನಿರಂಜನ ಕುಮಾರ್ ಹೇಳಿದರು.

ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಧರ್ಮಸ್ಥಳ ‌ಮಂಜುನಾಥೇಶ್ವರ ವಿಶ್ವವಿದ್ಯಾಲಯವು ಡಾ. ವೀರೇಂದ್ರ ಹೆಗ್ಗಡೆ ಆಶಯದಂತೆ ಒಳ್ಳೆಯ ವಿದ್ಯೆ ಒಳ್ಳೆಯ ಆರೋಗ್ಯ ಎಂಬುದನ್ನೇ ‌ಧ್ಯೇಯವಾಕ್ಯ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದೆ. ಈ ವಿಶ್ವವಿದ್ಯಾಲಯಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಈ‌ ಸಲ ಅನೇಕ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಅದರಲ್ಲಿ ಪ್ರಮುಖವಾಗಿ ಧಾರವಾಡ ಸುತ್ತಮುತ್ತಲಿನ ಹತ್ತು ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದತ್ತು ಪಡೆದುಕೊಂಡು ಅಭಿವೃದ್ಧಿ ಪಡೆಸಲು ನಿರ್ಧಾರ ಮಾಡಲಾಗಿದೆ ಎಂದರು.

ಕೊರೊನಾ ಹಿನ್ನೆಲೆಯಲ್ಲಿ ಅದ್ಧೂರಿ ಕಾರ್ಯಕ್ರಮದ ಬದಲಾಗಿ ಸರಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

Edited By :
Kshetra Samachara

Kshetra Samachara

18/12/2020 08:20 pm

Cinque Terre

81.07 K

Cinque Terre

28

ಸಂಬಂಧಿತ ಸುದ್ದಿ