ಧಾರವಾಡ: ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ವೇತನ ನೀಡಬೇಕು ಮತ್ತು ಬಾಕಿ ಇರುವ ಪ್ರೋತ್ಸಾಹ ಧನ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಕೊರೊನಾ ವಾರಿಯರ್ ಎಂದೇ ಕರೆಯಿಸಿಕೊಳ್ಳುವ ಆಶಾ ಕಾರ್ಯಕರ್ತೆಯರು ಈ ಹಿಂದೆ ಮಾಸಿಕ 12 ಸಾವಿರ ವೇತನ ನಿಗದಿ ಮಾಡಬೇಕು ಎಂದು ಕಳೆದ ಜುಲೈ 10 ರಿಂದ 29 ರವರೆಗೆ ಕೆಲಸ ಸ್ಥಗಿತಗೊಳಿಸಿ ಮುಷ್ಕರ ನಡೆಸಿದ್ದರು.
ಆದರೆ ಇದುವರೆಗೂ ಸರ್ಕಾರದಿಂದ ಸ್ಪಂದನೆ ದೊರೆಯದ ಹಿನ್ನೆಲೆ ಮತ್ತು ಇದರೊಂದಿಗೆ ಬಾಕಿ ಪ್ರೋತ್ಸಾಹ ಧನವನ್ನು ಕೂಡ ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಶಾ ಕಾರ್ಯಕರ್ತರು ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Kshetra Samachara
22/09/2020 02:33 pm