ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿದ್ದಾರೆ ಅಫ್ಘಾನಿಸ್ತಾನದ ವಿದ್ಯಾರ್ಥಿಗಳು

ಧಾರವಾಡ: ಎರಡು ದಶಕಗಳ ಬಳಿಕ ಅಫ್ಘಾನಿಸ್ತಾನ ಮತ್ತೆ ತಾಲಿಬಾನಿಗಳ ವಶಕ್ಕೆ ಒಳಗಾಗಿದೆ. ಹೀಗಾಗಿ ಆ ದೇಶದಲ್ಲಿ ಇದೀಗ ವಿಷಮ ಪರಿಸ್ಥಿತಿ ನಿರ್ಮಾಣವಾಗಿದ್ದು, ಭಾರತ ಕೂಡ ತನ್ನ ರಾಜತಾಂತ್ರಿಕರನ್ನು ವಾಪಸ್ ಕರೆಯಿಸಿಕೊಂಡಿದೆ. ಆದರೆ, ಧಾರವಾಡದ ಪ್ರತಿಷ್ಟಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಅಧ್ಯಯನಕ್ಕೆಂದು ಬಂದ ಅಫ್ಘಾನಿಸ್ತಾನದ ವಿದ್ಯಾರ್ಥಿಗಳು ಇದೀಗ ಆತಂಕ ಎದುರಿಸುವಂತಾಗಿದೆ.

ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಸಂರಕ್ಷಣಾ ವಿಷಯದಲ್ಲಿ ಪಿಎಚ್‌ಡಿ ಮಾಡಲು ಬಂದಿರುವ ಈ ವಿದ್ಯಾರ್ಥಿಗಳು, ತಮ್ಮ ದೇಶವನ್ನು ತಾಲಿಬಾನಿಗಳು ವಶಕ್ಕೆ ಪಡೆದಿರುವುದನ್ನು ಕೇಳಿ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಒಟ್ಟು 15 ವಿದ್ಯಾರ್ಥಿಗಳು ಕೃಷಿ ವಿವಿಗೆ ಅಧ್ಯಯನಕ್ಕೆಂದು ಬಂದಿದ್ದರು. ಕೊರೊನಾ ಎರಡನೇ ಅಲೆ ವೇಳೆ ಐವರು ವಿದ್ಯಾರ್ಥಿಗಳು ಮರಳಿ ತಮ್ಮ ದೇಶಕ್ಕೆ ಹೋಗಿ ಇದೀಗ ಅಲ್ಲಿ ತಾಲಿಬಾನಿಗಳ ಕಪಿಮುಷ್ಠಿಗೆ ಸಿಲುಕಿದ್ದಾರೆ. 10 ವಿದ್ಯಾರ್ಥಿಗಳು ಧಾರವಾಡದಲ್ಲೇ ಉಳಿದಿದ್ದು, ತಮ್ಮ ಕುಟುಂಬದ ಬಗ್ಗೆ ವಿಚಾರ ಮಾಡುತ್ತಿದ್ದಾರೆ. ಅಫ್ಘಾನಿಸ್ತಾನದಲ್ಲಿ ಮೆರಿಟ್ ಪಡೆದು ಹೆಚ್ಚಿನ ವ್ಯಾಸಾಂಗಕ್ಕಾಗಿ ಬಂದಿದ್ದ ಇವರು, ಇದೀಗ ತಮ್ಮ ದೇಶಕ್ಕೆ ಎದುರಾಗಿರುವ ವಿಷಮ ಪರಿಸ್ಥಿತಿ ನೆನೆದು ಕಣ್ಣೀರು ಹಾಕುವಂತಾಗಿದೆ. ಅಧ್ಯಯನ ಬಿಟ್ಟು ತಮ್ಮ ಕುಟುಂಬದ ಸದಸ್ಯರ ಬಗ್ಗೆ ಇವರು ಚಿಂತೆ ಮಾಡುವಂತಾಗಿದ್ದು, ತಮ್ಮ ಕುಟುಂಬದ ಸದಸ್ಯರ ಜೊತೆಗೆ ಇದೀಗ ಮಾತನಾಡಿರುವುದಾಗಿ ಅಫ್ಘಾನಿಸ್ತಾನದ ವಿದ್ಯಾರ್ಥಿ ನಸ್ರತ್‌ಉಲ್ಲಾ ಕಾಕರ್ ಹೇಳಿದರು.

ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಅಂತರರಾಷ್ಟ್ರೀಯ ವಿದ್ಯಾರ್ಥಿ ನಿಲಯದಲ್ಲಿ ಈ ವಿದ್ಯಾರ್ಥಿಗಳು ಉಳಿದುಕೊಂಡಿದ್ದು, ತಮ್ಮ ಕುಟುಂಬದ ಸದಸ್ಯರಿಗೆ ಪ್ರತಿಕ್ಷಣ ಫೋನ್ ಮಾಡಿ ವಿಚಾರಿಸುತ್ತಿದ್ದಾರೆ. ಸದ್ಯ ನಮ್ಮ ಕುಟುಂಬದ ಸದಸ್ಯರಿಗೆ ತಾಲಿಬಾನಿಗಳಿಂದ ಯಾವುದೇ ತೊಂದರೆ ಆಗಿಲ್ಲ ಎಂಬುದನ್ನು ತಿಳಿದುಕೊಂಡಿದ್ದೇವೆ ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದು, ತಮ್ಮ ದೇಶಕ್ಕೆ ಎದುರಾಗಿರುವ ವಿಷಮ ಪರಿಸ್ಥಿತಿ ಶೀಘ್ರವೇ ಕೊನೆಗಾನಲಿ ಎನ್ನುತ್ತಿದ್ದಾರೆ.

-ಪ್ರವೀಣ ಓಂಕಾರಿ, ಪಬ್ಲಿಕ್ ನೆಕ್ಸ್ಟ್, ಧಾರವಾಡ.

Edited By : Shivu K
Kshetra Samachara

Kshetra Samachara

16/08/2021 06:43 pm

Cinque Terre

57.22 K

Cinque Terre

0

ಸಂಬಂಧಿತ ಸುದ್ದಿ