ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಯಶಸ್ವಿಯಾದ ರಕ್ಷಣೆ ಕಾರ್ಯಾಚರಣೆ, ಸುರಕ್ಷಿತವಾಗಿ ಮನೆ ತಲುಪಿದ ಮಕ್ಕಳು

ನವಲಗುಂದ : ನವಲಗುಂದ ತಾಲ್ಲೂಕಿನ ಅಮರಗೋಳ ಗ್ರಾಮದಲ್ಲಿನ ಹಳ್ಳದ ಹರಿವು ಹೆಚ್ಚಿದ ಹಿನ್ನೆಲೆ ಸರ್ಕಾರಿ ಪ್ರೌಢ ಶಾಲೆಗೆ ತೆರಳಿದ್ದ ಸುಮಾರು 150 ವಿದ್ಯಾರ್ಥಿಗಳು ಶಾಲೆಯಲ್ಲಿಯೇ ಸಿಲುಕುವಂತಾಗಿತ್ತು. ಈಗ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಕ್ಕಳನ್ನು ಮನೆಗಳಿಗೆ ಕಳುಹಿಸುವ ಕಾರ್ಯ ಯಶಸ್ವಿಯಾದೆ.

ಬೆಳವಟಗಿ ಗ್ರಾಮ ಪಂಚಾಯತ್ ಅಧಿಕಾರಿ, ಸದಸ್ಯರು, ಸಿಬ್ಬಂದಿ, ಪೊಲೀಸ್ ಇಲಾಖೆ, ಪೊಲೀಸ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಸೇರಿ ವಿದ್ಯಾರ್ಥಿಗಳ ರಕ್ಷಣೆಗೆ ಮುಂದಾಗಿ, ಟ್ರ್ಯಾಕ್ಟರ್ ಮೂಲಕ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಶಾಲೆಯಿಂದ ಕರೆದುಕೊಂಡು ಬರಲಾಯಿತು.

ಇನ್ನು ಪಬ್ಲಿಕ್ ನೆಕ್ಸ್ಟ್ ಗೆ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮನೆಗಳಿಗೆ ತೆರಳಿದ್ದಾರೆ ಎಂದು ಬೆಳವಟಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶಿವಾನಂದ ಹಂಪಿಹೊಳಿ ಅವರು ಮಾಹಿತಿ ನೀಡಿದ್ದಾರೆ.

Edited By : Manjunath H D
Kshetra Samachara

Kshetra Samachara

16/06/2022 09:09 pm

Cinque Terre

84.99 K

Cinque Terre

5

ಸಂಬಂಧಿತ ಸುದ್ದಿ