ಹುಬ್ಬಳ್ಳಿ: ಏಕಾಏಕಿಯಾಗಿ ತುಂಬಿ ಹರಿಯುತ್ತಿರುವ ಬೆಣ್ಣೆ ಹಳ್ಳದ ಮಧ್ಯದಲ್ಲಿ 25ಕ್ಕೂ ಹೆಚ್ಚು ಜನರು ಸಿಲುಕಿಕೊಂಡು ವ್ಯಕ್ತಿಯೋರ್ವನು ಕೊಚ್ಚಿ ಹೋಗಿರುವ ಘಟನೆ ಹುಬ್ಬಳ್ಳಿಯ ತಾಲೂಕಿನ ಇಂಗಳಹಳ್ಳಿ ಗ್ರಾಮದ ಬಳಿ ನಡೆದಿದೆ.
ಮಳೆಯಿಂದ ಬೆಣ್ಣೆ ಹಳ್ಳ ತುಂಬಿ ಹರಿದ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಇನ್ಸ್ಪೆಕ್ಟರ್ ರಮೇಶ್ ಗೋಕಾಕ್ ಮತ್ತು ತಹಶೀಲ್ದಾರ ಪ್ರಕಾಶ ನಾಶಿ ಭೇಟಿ ನೀಡಿದ್ದು, 20ಕ್ಕೂ ಹೆಚ್ಚು ಜನರ ರಕ್ಷಣೆ ಮಾಡಲಾಗಿದೆ.
ಇನ್ನೂ ಇನ್ಸ್ ಪೆಕ್ಟರ್ ರಮೇಶ್ ಗೋಕಾಕ್ ಹಾಗೂ ತಹಶೀಲ್ದಾರ್ ಪ್ರಕಾಶ್ ನಾಶಿ ಕಾರ್ಯಾಚರಣೆ ನಡೆಸಿದ್ದು, ನೀರಿನಲ್ಲಿ ಕೊಚ್ಚಿಕೊಂಡು ಹೋದ ಓರ್ವ ವ್ಯಕ್ತಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.
Kshetra Samachara
29/08/2022 05:56 pm