ಧಾರವಾಡ: ಇಂದು ಬೆಳಿಗ್ಗೆ ವಿಧಿವಶರಾದ ಹಿರಿಯ ಕವಿ ಡಾ.ಚೆನ್ನವೀರ ಕಣವಿ ಅವರನ್ನು ಅವರ ಆಸೆಯಂತೆಯೇ ಪತ್ನಿಯ ಸಮಾಧಿ ಪಕ್ಕದಲ್ಲೇ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಅವರ ಪುತ್ರ ಶಿವಾನಂದ ಕಣವಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಣವಿ ಅವರು ಅನಾರೋಗ್ಯದಿಂದ ಜ. 14ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಎಲ್ಲ ಅಂಗಾಂಗಗಳು ಚೆನ್ನಾಗಿ ಕೆಲಸ ಮಾಡುತ್ತಿದ್ದವು. ಆದರೆ ಶ್ವಾಸಕೋಶಕ್ಕೆ ಕೊರೊನಾ ಸೋಂಕು ಇತ್ತು. ನಂತರದಲ್ಲಿ ಕೊರೊನಾದಿಂದ ಗುಣಮುಖರಾದ ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಆದರೆ ಉಳಿಸಿಕೊಳ್ಳಲು ಆಗಲಿಲ್ಲ ಎಂದರು.
ನಮ್ಮ ಫಾರ್ಮ ಹೌಸ್‌ನಲ್ಲೇ ನಮ್ಮ ತಾಯಿಯವರ ಸಮಾಧಿ ಪಕ್ಕದಲ್ಲೇ ತಂದೆಯವರ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದರು.
Kshetra Samachara
16/02/2022 01:48 pm