ನವಲಗುಂದ : ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಶುಕ್ರವಾರ ನವಲಗುಂದ ನಗರದ ತಾಲ್ಲೂಕು ಪಂಚಾಯತ್ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಇನ್ನು ಕಾರ್ಯಕ್ರಮಕ್ಕೆ ತಾಲ್ಲೂಕು ಕಾನೂನು ಸೇವಾ ಸಮಿತಿಯ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ಮತ್ತು ಅಧ್ಯಕ್ಷರಾದ ಮಂಜುನಾಥ ಡಿ.ಆರ್ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ಸಹಾಯಕ ಕಾರ್ಮಿಕ ಆಯುಕ್ತರಾದ ಶ್ವೇತಾ ಎಸ್ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ತಹಶೀಲ್ದಾರ ನವೀನ ಹುಲ್ಲೂರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ ಎಸ್ ಮಾಯಾಚಾರ್ಯ, ಹುಬ್ಬಳ್ಳಿಯ ಹಿರಿಯ ಕಾರ್ಮಿಕ ನಿರೀಕ್ಷಿಕರಾದ ಅಕ್ರಮ ಅಲ್ಲಾಪುರ ಸೇರಿದಂತೆ ಹಲವರು ಇದ್ದರು.
ಅಷ್ಟೇ ಅಲ್ಲದೆ ಈ ಹಿಂದೆ 71ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಸಂಪ್ರದಾಯಕ ವಾರ ಸಪ್ತಾಹ ಕಾರ್ಯಕ್ರಮ ಮತ್ತು ಪಿಂಚಣಿ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
Kshetra Samachara
11/03/2022 03:25 pm