ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಯೋಧನ ಪಾರ್ಥಿವ ಶರೀರಕ್ಕೆ ಶಾಸಕಿ ಕುಸುಮಾವತಿ ನಮನ

ಕುಂದಗೋಳ: ಕಳೆದ ಐದು ದಿನಗಳ ಹಿಂದಷ್ಟೇ ಸ್ವಗ್ರಾಮಕ್ಕೆ ಆಗಮಿಸಿ ಮರಳಿ ಕರ್ತವ್ಯಕ್ಕೆ ತೆರಳಿದ್ದ ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದ ಬಿ.ಎಸ್.ಎಫ್ ಯೋಧ ಗಂಗಾಧರಯ್ಯ ಹಿರೇಮಠ ಅವರು ಕರ್ತವ್ಯದ ವೇಳೆ ಹೃದಯಘಾತದಿಂದ ಮೃತರಾಗಿದ್ದಾರೆ.

ಪಶ್ಚಿಮ ಬಂಗಾಳದ ಕುಚ್ ಬಿಹಾರ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಆ.27 ರಂದು ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಸೇನೆಯ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಇಂದು ಪಶ್ಚಿಮಬಂಗಾಳದಿಂದ ಬೆಂಗಳೂರಿಗೆ ಆಗಮಿಸಿದ ಮೃತ ಯೋಧ ಗಂಗಾಧರಯ್ಯ ಹಿರೇಮಠ ಅವರ ಪಾರ್ಥಿವ ಶರೀರಕ್ಕೆ ಶಾಸಕಿ ಕುಸುಮಾವತಿ ಶಿವಳ್ಳಿ ಸೇನಾಧಿಕಾರಿಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಅಂತಿಮ ನಮನ ಸಲ್ಲಿಸಿದರು.

ಬೆಂಗಳೂರಿನಿಂದ ಮೃತ ಯೋಧನ ಪಾರ್ಥಿವ ಶರೀರ ಸೇನಾ ವಾಹನದ ಮೂಲಕ ನಾಳೆ ಸ್ವ ಗ್ರಾಮ ರೊಟ್ಟಿಗವಾಡಕ್ಕೆ ಬರಲಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Edited By : Somashekar
Kshetra Samachara

Kshetra Samachara

28/08/2022 09:18 pm

Cinque Terre

87.26 K

Cinque Terre

12

ಸಂಬಂಧಿತ ಸುದ್ದಿ