ನರಗುಂದ : ಗೂರ್ಖಾ ಒಬ್ಬರ ಮೇಲೆ ಕಳ್ಳರು ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ಅವರ ಚಿಕಿತ್ಸೆ ಮತ್ತು ಜೀವನೋಪಾಯಕ್ಕಾಗಿ ಸ್ಥಳೀಯರು ಹಣ ಸಂಗ್ರಹ ಮಾಡಲು ಮುಂದಾಗಿದ್ದಾರೆ.
ಕಳೆದ ಎರಡು ದಿನದ ಹಿಂದೆ ನರಗುಂದ ಪಟ್ಟಣದಲ್ಲಿ ರಾತ್ರಿ ವೇಳೆ ಕಳ್ಳರನ್ನು ಕಂಡ ನರಸಿಂಗ ಎಂಬ ಗೂರ್ಖಾ ಒಬ್ಬರು ಅವರನ್ನು ತಡೆಯಲು ಮುಂದಾದಾಗ ಅವರ ಮೇಲೆ ಕಳ್ಳರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಅವರಿಗಾಗಿ ಈಗ ನರಗುಂದದ ಸಂಘಟನೆಯ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಬೀದಿಗಿಳಿದು ಹಣ ಸಂಗ್ರಹಣೆಗೆ ಮುಂದಾಗಿದ್ದಾರೆ.
Kshetra Samachara
19/01/2021 04:10 pm