ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮಗಳ‌ ಹುಟ್ಟು ಹಬ್ಬಕ್ಕೆ ಹೆಲ್ಮೆಟ್ ವಿತರಿಸಿ ವಿಶೇಷವಾಗಿ ಹುಟ್ಟು ಹಬ್ಬ ಆಚರಿಸಿದ ಹೆಬಸೂರ ದಂಪತಿ...!

ಹುಬ್ಬಳ್ಳಿ: ಹೆಲ್ಮೆಟ್ ಇಲ್ಲದೆ ಇರುವುದರಿಂದ ಸಾಕಷ್ಟು ರಸ್ತೆ ಅಪಘಾತಗಳಲ್ಲಿ ಸಾವು ಸಂಭವಿಸುತ್ತವೆ. ಹೀಗಾಗಿ ರಸ್ತೆ ಸುರಕ್ಷತೆ ಹಾಗೂ ಹೆಲ್ಮೆಟ್ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರದ ಯುವ ಸಾಮಾಜಿಕ ಕಾರ್ಯಕರ್ತ ಮಂಜುನಾಥ ಹೆಬಸೂರು ಅವರು ತಮ್ಮ ಮಗಳು ಅಶ್ವಿಕಾಮಾನ್ಯಾ ಹೆಬಸೂರ ಎರಡನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ಹೆಲ್ಮೆಟ್ ವಿತರಿಸಿ ವಿಶಿಷ್ಟವಾಗಿ ಹುಟ್ಟು ಹಬ್ಬ ಆಚರಿಸಿದರು.

ನಗರದ ಚೆನ್ನಮ್ಮ ವೃತ್ತದಲ್ಲಿ ಹೆಲ್ಮೆಟ್ ಇಲ್ಲದೇ ಸಂಚರಿಸುವ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಿಸಿದರು. ಕಳೆದ ವರ್ಷ ಕೂಡ ಇಪ್ಪತ್ತೈದು ಹೆಲ್ಮೆಟ್ ನೀಡಲಾಗಿತ್ತು. ಈ ವರ್ಷ ಕೂಡ ಇಪ್ಪತ್ತೈದು ಹೆಲ್ಮೆಟ್ ಸಾರ್ವಜನಿಕರಿಗೆ ವಿತರಿಸುವ ಮೂಲಕ ಜಾಗೃತಿ ಮೂಡಿಸಿದರು‌.

ಈ ಸಂದರ್ಭದಲ್ಲಿ ಮಂಜುನಾಥ ಹಾಗೂ ಸುಪ್ರಿಯಾ ಹೆಬಸೂರ, ಲಿಂಗರಾಜ ಪಾಟೀಲ, ಬಸವರಾಜ ಕುಂದಗೋಳಮಠ, ಸಂಚಾರಿ ಇನ್ಸಪೆಕ್ಟರ್ ಎಸ್ ವಿ ಕಾಡದೇವರಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

21/09/2021 01:56 pm

Cinque Terre

31.19 K

Cinque Terre

5

ಸಂಬಂಧಿತ ಸುದ್ದಿ