ಹುಬ್ಬಳ್ಳಿ: ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ನಿರ್ವಹಣೆಯಾಗುತ್ತಿರುವ ಎಲ್ಲ 45 ವಸತಿ ಶಾಲೆ , ವಿದ್ಯಾರ್ಥಿ ನಿಲಯಗಳು ಹಾಗೂ ಕಾರ್ಯಾಲಯಗಳಲ್ಲಿ ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತೆ ಹಾಗೂ ಶ್ರಮದಾನ ಕಾರ್ಯಕ್ರಮ ಜರುಗಿತು.
ಹುಬ್ಬಳ್ಳಿಯ ಘಂಟಿಕೇರಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ಇಂದು ಜಿಲ್ಲೆಯ ನೋಡಲ್ ಅಧಿಕಾರಿಯಾಗಿರುವ , ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಹೆಚ್.ನಟರಾಜ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಎನ್.ಆರ್.ಪುರುಷೋತ್ತಮ ಅವರು ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶ್ರಮದಾನ ಕಾರ್ಯಕ್ಕೆ ಚಾಲನೆ ನೀಡಿದರು.
Kshetra Samachara
03/10/2021 03:26 pm