ಅಣ್ಣಿಗೇರಿ: ಹೆರಿಗೆಗಾಗಿ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಆ್ಯಂಬುಲೆನ್ಸ್ನಲ್ಲೇ ತಾಯಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಗಣರಾಜ್ಯೋತ್ಸವದಂದು ಈ ಘಟನೆ ನಡೆದಿದ್ದು ತಾಯಿ-ಮಗು ಆರೋಗ್ಯವಾಗಿದ್ದಾರೆ.
ತಾಲೂಕಿನ ಮಜ್ಜಿಗುಡ್ಡ ಗ್ರಾಮದ ದಿಲ್ಶಾದ್ ಬೇಗಮ್ ಹುಸೇನ್ ಸಾಬ್ ಡಂಬಳ ಎಂಬ ಗರ್ಭಿಣಿ ಹೆರಿಗೆ ನೋವಿನಿಂದ ಬಳಲುತ್ತಿದ್ದು, ತಕ್ಷಣ 108 ಆ್ಯಂಬುಲೆನ್ಸ್ಗೆ ಕರೆ ಮಾಡಿ ಅಲ್ಲಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಅಣ್ಣಿಗೇರಿ ಪಟ್ಟಣ ಸಮೀಪ ದಿಲ್ಶಾದ್ ಬೇಗಮ್ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಇನ್ನೂ ತಾಯಿ-ಮಗು ಆರೋಗ್ಯವಂತರಾಗಿದ್ದು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು 108 ಆ್ಯಂಬುಲೆನ್ಸ್ ಸಿಬ್ಬಂದಿ ಹೇಳಿದ್ದಾರೆ.
Kshetra Samachara
30/01/2022 01:19 pm