ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಇದೇ ಮೊದಲ ಬಾರಿಗೆ ನೀಡುತ್ತಿರುವ ಸಿರಿಗನ್ನಡಂ ಗೆಲ್ಗೆ ರಾ.ಹ.ದೇಶಪಾಂಡೆ ಪ್ರಶಸ್ತಿಯು ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಅವರಿಗೆ ಲಭಿಸಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು.
ಅದೇ ರೀತಿ ಕನ್ನಡ ಪ್ರಪಂಚ ಪಾಟೀಲ ಪುಟ್ಟಪ್ಪ ಪ್ರಶಸ್ತಿಯು ಸಂಯುಕ್ತ ಕರ್ನಾಟಕ ಪತ್ರಿಕೆಗೆ ಲಭಿಸಿದೆ. ಎರಡೂ ಪ್ರಶಸ್ತಿಗಳು ತಲಾ 50 ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಂಘದ 133ನೇ ವರ್ಷಾಚರಣೆ ನಡೆಯುತ್ತಿರುವ ಸಂದರ್ಭದಲ್ಲಿ ಸಂಘವನ್ನು ಕಟ್ಟಿ ಬೆಳೆಸಿದ ಮಹನೀಯರ ಹೆಸರನ್ನು ಶಾಶ್ವತವಾಗಿಸುವ ಪ್ರಯತ್ನ ಇದಾಗಿದೆ. ಇವುಗಳಿಗೆ ಅಗತ್ಯವಿರುವ ಹಣವನ್ನು ಸಂಘದ ಆಂತರಿಕ ಸಂಪನ್ಮೂಲಗಳಿಂದ ಸಂಗ್ರಹಿಸಿ ನೀಡಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭವು ಸಂಘದ ಸ್ಥಾಪನೆಯಾದ ಜುಲೈ 20 ರಂದು ನೀಡಲಾಗುವುದು ಎಂದರು.
Kshetra Samachara
04/07/2022 09:01 pm