ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಚರಂಡಿಯಲ್ಲಿ ಸಿಲುಕಿದ್ದ ಹಸುವನ್ನು ಮೇಲೆತ್ತಿದ ಸ್ಥಳೀಯರು

ಹುಬ್ಬಳ್ಳಿ: ಮಳೆಯಿಂದ ವಾಣಿಜ್ಯನಗರಿ ಹುಬ್ಬಳ್ಳಿಯ ಬಹುತೇಕ ಕಾಲುವೆಗಳು ತುಂಬಿ ಹರಿಯುತ್ತಿದ್ದು, ಜಾನುವಾರೊಂದು ಆಯತಪ್ಪಿ ಕಾಲುವೆಗೆ ಬಿದ್ದಿರುವ ಪರಿಣಾಮ ಸ್ಥಳೀಯರೇ ಜಾನುವಾರು ರಕ್ಷಣೆ ಮಾಡಿರುವ ಘಟನೆ ಹುಬ್ಬಳ್ಳಿಯ ಶೀಲವಂತರ ಓಣಿಯಲ್ಲಿ ನಡೆದಿದೆ.

ಹೌದು.. ಸುಮಾರು ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಮಾತ್ರವಲ್ಲದೆ ಬೀದಿ ದನಗಳು ಕೂಡ ಕಂಗಾಲ ಆಗಿದ್ದು, ಈ ಹಿನ್ನೆಲೆಯಲ್ಲಿ ಆಹಾರ ಅರಸಿಕೊಂಡು ಹೋಗಿದ್ದ ಜಾನುವಾರೊಂದು ಬಿದ್ದು, ಸಾವು ಬದುಕಿನ ಮಧ್ಯ ಹೋರಾಟ ನಡೆಸಿತ್ತು. ಸುದ್ಧಿ ತಿಳಿಯುತ್ತಿದ್ದಂತೆಯೇ ದೌಡಾಯಿಸಿದ ಸ್ಥಳೀಯರು ಜಾನುವಾರು ರಕ್ಷಣೆ ಮಾಡಿ ಚಿಕಿತ್ಸೆ ನೀಡಿದ್ದಾರೆ.

ಈಗಾಗಲೇ ಬಹುತೇಕ ಕಡೆಯಲ್ಲಿ ಚರಂಡಿ ಅವ್ಯವಸ್ಥೆಯಿಂದ ಇಂತಹ ಅವಘಡಗಳು ಸಂಭವಿಸುತ್ತಿದ್ದು, ಕೂಡಲೇ ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡು ಸೂಕ್ತ ಕ್ರಮಗಳನ್ನು ಜರುಗಿಸಬೇಕಿದೆ.

Edited By : Shivu K
Kshetra Samachara

Kshetra Samachara

12/07/2022 01:24 pm

Cinque Terre

14.46 K

Cinque Terre

1

ಸಂಬಂಧಿತ ಸುದ್ದಿ