ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸುತಿದ್ದ ಗುರುಲಿಂಗಸ್ವಾಮಿಯವರು ಅಕಾಲಿಕವಾಗಿ ನಿಧನರಾಗಿದ್ದು, ಮೃತರ ಪಾರ್ಥಿವ ಶರೀರ ಹುಬ್ಬಳ್ಳಿಯ ಚೆನ್ನಮ್ಮ ವೃತ್ತಕ್ಕೆ ಆಗಮಿಸಿದ್ದು, ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಹಿರಿಯ ಪತ್ರಕರ್ತ ಹಾಗೂ ಸಿಎಂ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗುರುಲಿಂಗಸ್ವಾಮಿಯವರು ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಜೊತೆಗೆ ಉತ್ತಮ ಒಡನಾಟ ಹೊಂದಿದ್ದರು. ಅಲ್ಲದೇ ಇಂದು ಕೂಡ ಹುಬ್ಬಳ್ಳಿಯ ಪತ್ರಕರ್ತರ ಭವನದಲ್ಲಿ ಗೌರವ ಸಮರ್ಪಿಸಲಾಗಿತ್ತು.
ಇನ್ನೂ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಗೆ ಆಗಮಿಸಿದ ಪಾರ್ಥಿವ ಶರೀರವನ್ನು ಸ್ವಾಗತಿಸಿದ ಪತ್ರಕರ್ತರು ಹಾಗೂ ಸಾರ್ವಜನಿಕರ ಅಂತಿಮ ನಮನ ಸಲ್ಲಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
22/08/2022 10:33 pm