ಹುಬ್ಬಳ್ಳಿ: ಮಾನಸಿಕ ಅಸ್ವಸ್ಥನೊಬ್ಬ ಸಿಕ್ಕ ಸಿಕ್ಕ ಆಟೋ ರಿಕ್ಷಾ ಹಾಗೂ ಸಾರ್ವಜನಿಕರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಪರಿಣಾಮ ಆಟೋ ಚಾಲಕರು ಹಾಗೂ ಸಾರ್ವಜನಿಕರು ಭಯಗೊಂಡಾಗ, ಪೊಲೀಸರು ಸ್ಥಳೀಯರ ಸಹಾಯದಿಂದ ಮಾನಸಿಕ ಅಸ್ವಸ್ಥನನ್ನು ವಶಕ್ಕೆ ಪಡೆದಿದ್ದಾರೆ.
ಹಳೇ ಹುಬ್ಬಳ್ಳಿಯ ದುರ್ಗದ ಬೈಲ್ ಸರ್ಕಲ್ ಬಳಿಯಲ್ಲಿ ನಿನ್ನೆ ರಾತ್ರಿ ಸುಮಾರು 30 ರಿಂದ 35 ವರ್ಷದ ಮಾನಸಿಕ ಅಶ್ವಸ್ಥನಾಗಿದ್ದ ಯುವಕ, ಆಟೋ ಹಾಗೂ ಸಾರ್ವಜನಿಕರ ಮೇಲೆ ಕಲ್ಲು ಹಾಗೂ ಕಟ್ಟಿಗೆಯಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ. ಆಗ ಪೊಲೀಸರು ಸ್ಥಳೀಯರ ಸಹಾಯದಿಂದ ಮಾನಸಿಕ ಅಸ್ವಸ್ಥನನ್ನು ಹಿಡಿದಿದ್ದಾರೆ.
ಸದ್ಯ ಮಾನಸಿಕ ಅಸ್ವಸ್ಥನನ್ನು ಕಸಬಾಪೇಟ ಪೊಲೀಸ್ ಠಾಣೆಗೆ ಕರೆದದೊಯ್ಯಲಾಗಿದ್ದು, ಈತ ಯಾರು ಎಲ್ಲಿಂದ ಬಂದ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
Kshetra Samachara
06/10/2022 07:47 pm