ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಗಾಂಧಿ ಪುರಸ್ಕಾರ ಗಿಟ್ಟಿಸಿಕೊಂಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮದ ಜ್ವಲಂತ ಸಮಸ್ಯೆ ಇನ್ನೂ ಜೀವಂತ

ಅಣ್ಣಿಗೇರಿ: ತಾಲೂಕಿನ ನಲವಡಿ ಗ್ರಾಮ ಇತ್ತೀಚೆಗಷ್ಟೇ ಉತ್ತಮ ನಿರ್ವಹಣೆ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಮಹಾತ್ಮಾ ಗಾಂಧಿ ಪುರಸ್ಕಾರ ಗಿಟ್ಟಿಸಿಕೊಂಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆದರೆ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಣಕವಾಡ ಗ್ರಾಮದ ಸ್ಥಿತಿ ಮಾತ್ರ ಚಿಂತಾಜನಕವಾಗಿದೆ.

ನಲವಡಿ ಗ್ರಾಮದಿಂದ ಮಣಕವಾಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ ಹಲವು ವರ್ಷಗಳಿಂದ ಸಂಪೂರ್ಣವಾಗಿ ಹಾಳಾಗಿದ್ದು, ಈ ರಸ್ತೆಯಲ್ಲಿ ಸಂಚರಿಸುವ ಗ್ರಾಮಸ್ಥರಿಗೆ ಪ್ರತಿದಿನ ನರಕಯಾತನೆ ಅನುಭವಿಸುವಂತೆ ಮಾಡಿದೆ. ಇನ್ನೂ ರಸ್ತೆಯ ಪಕ್ಕದಲ್ಲೇ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆಯ ನೀರು ನಿಂತು ಪಾಚಿಗಟ್ಟುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡುವುದಕ್ಕೆ ಎಡೆಮಾಡಿಕೊಟ್ಟಿದೆ.

ಈ ಕುರಿತು ಈ ಗ್ರಾಮಸ್ಥರು ಸಾಕಷ್ಟು ಬಾರಿ ಜನಪ್ರತಿನಿಧಿಗಳಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಯಾರೊಬ್ಬರೂ ಇತ್ತ ಚಿತ್ತ ಹರಿಸದೇ ನಿರ್ಲಕ್ಷ್ಯ ಧೋರಣೆ ತೋರುತ್ತಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ಈ ರಸ್ತೆ ದುರಸ್ತಿಗೊಳಿಸಿ ಈ ಭಾಗದ ಜನಸಾಮಾನ್ಯರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕಿದೆ.

Edited By : Nagesh Gaonkar
Kshetra Samachara

Kshetra Samachara

16/10/2020 01:00 pm

Cinque Terre

26.67 K

Cinque Terre

1

ಸಂಬಂಧಿತ ಸುದ್ದಿ