ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಭೂ ಸುಧಾರಣೆ ಕಾಯಿದೆ ಕೃಷಿ ಸಮುದಾಯಕ್ಕೆ ಮಾರಕವಾಗಿದೆ ಮೊದಲು ಈ ನಿರ್ಧಾರ ಕೈ ಬಿಡಿ

ಹುಬ್ಬಳ್ಳಿ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಭಾರತೀಯ ಕಿಸಾನ್ ಸಂಘದ ಕರ್ನಾಟಕ ಉತ್ತರ ಪ್ರಾಂತ್ಯದ ಪದಾಧಿಕಾರಿಗಳು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿದರು.

ಭೂ ಸುಧಾರಣೆ ಕಾಯ್ದೆ ರೈತರಿಗೆ, ಕೃಷಿ ಕಾರ್ಮಿಕರಿಗೆ ಮರಣ ಶಾಸನವಾಗಿದೆ. ವ್ಯವಸಾಯ ಮಾಡಲು ಆಸಕ್ತರಿಗೆ ಭೂಮಿ ಖರೀದಿ ಮಾಡಲು ಅನುಕೂಲವಾಗಲು ತಿದ್ದುಪಡಿ ತರಲಾಗಿದೆ ಎಂದು ಸರ್ಕಾರ ಹೇಳಿದೆ. ಆದರೆ ಭೂ ಸುಧಾರಣೆ ಕಲಂ 79 ಎ.ಬಿ.ಸಿ ಹಾಗೂ 80ಗೆ ಇದ್ದ ಅಧಿಕಾರ ಕಡಿತ ಮಾಡಿ 63 ಕಲಂ ಗೆ ನೀಡಲಾಗಿದೆ. ಇದರಿಂದಾಗಿ ಇದು ರೈತರಿಗೆ ಮಾರಕವಾಗಿದೆ. ಕೃಷಿ ಮಾಡುತ್ತಿರುವ ರೈತರು ಕೃಷಿ ಚಟುವಟಿಕೆಯಿಂದ ವಿಮುಖರಾಗುತ್ತಿರುವ ಬಗ್ಗೆ ಹಾಗೂ ಆತ್ಮಹತ್ಯೆಗೆ ಶರಣಾಗುತ್ತಿರುವ ಬಗ್ಗೆ ಪರಿಹಾರ ಹುಡುಕದೇ ಬದಲಾಗಿ ಕಾರ್ಪೋರೆಟ್ ಕಂಪನಿಗಳಿಗೆ, ಬಂಡವಾಳಶಾಹಿಗಳು, ಅಕ್ರಮವಾಗಿ ಹಣ ಗಳಿಸಿದವರು, ಬೃಹತ್ ಕಂಪನಿಗಳ ಹಿತಾಸಕ್ತಿಗೆ ಮಣಿದು ರಾಜ್ಯ ಸರ್ಕಾರ ಭೂ ಸುಧಾರಣೆ ಮಾಡಿರುವುದು ಖಂಡನೀಯವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Edited By : Nagesh Gaonkar
Kshetra Samachara

Kshetra Samachara

16/10/2020 01:43 pm

Cinque Terre

14.19 K

Cinque Terre

0

ಸಂಬಂಧಿತ ಸುದ್ದಿ