ಧಾರವಾಡ: ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಧಾರವಾಡ ಜಿಲ್ಲೆಯಲ್ಲಿ 55 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸುರಿದ ಮಳೆಯಿಂದಾಗಿ 699 ಕೋಟಿಯಷ್ಟು ನಷ್ಟವಾಗಿತ್ತು. ಅದರೊಂದಿಗೆ ಈಗ ನಾಲ್ಕೈದು ದಿನಗಳಿಂದ ಸುರಿದ ಮಳೆಯಿಂದ 55 ಕೋಟಿ ನಷ್ಟವಾಗಿದ್ದು, ಈ ಎಲ್ಲ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಇದುವರೆಗೆ 1274 ಮನೆಗಳಿಗೆ ಹಾನಿಯಾಗಿದೆ. 56 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದ್ದು, 323 ಕೋಟಿ ಬೆಳೆ ಹಾನಿಯಾಗಿದೆ. ಈಗಾಗಲೇ ಬೆಳೆ ನಷ್ಟ ಅನುಭವಿಸಿದ ಹಾಗೂ ಮನೆ ಕಳೆದುಕೊಂಡವರ ವಿವರವನ್ನು ದಾಖಲು ಮಾಡಲಾಗುತ್ತಿದ್ದು, ಅವರೆಲ್ಲರಿಗೆಲ್ಲ ಪರಿಹಾರ ಕೂಡ ಬರಲಿದೆ ಎಂದರು.
Kshetra Samachara
16/10/2020 03:38 pm