ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಪ್ಪಾ ಯಪ್ಪಾ ಏನ್ ಹುಬ್ಬಳ್ಳಿ ಸ್ಮಾರ್ಟ್ ರಸ್ತೆ ರೀ......

ಹುಬ್ಬಳ್ಳಿ: ಹು-ಧಾ ಮಹಾನಗರದಲ್ಲಿ ರಸ್ತೆ ಗುಂಡಿಗಳ ಸಮಸ್ಯೆ ಹೇಳ ತೀರದಾಗಿದ್ದು,ಅವಳಿನಗರದ ರಸ್ತೆ ಅವ್ಯವಸ್ಥೆಯಿಂದ ವಾಹನ ಸವಾರರು ಒಂದಲ್ಲೊಂದು ಸಮಸ್ಯೆಯಲ್ಲಿ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಹೌದು..ಇಂದು ಬೆಳಿಗ್ಗೆ ಸರಕು ಹೊತ್ತು ಸಾಗುತ್ತಿದ್ದ ಲಾರಿಯೊಂದು ರಸ್ತೆಯ ಸ್ಟೇಷನ್ ರಸ್ತೆಯಲ್ಲಿರುವ ಹರ್ಷ ಕಾಂಪ್ಲೆಕ್ಸ್ ಬಳಿ ಗುಂಡಿಯಲ್ಲಿ ಸಿಲುಕಿಕೊಂಡಿದ್ದು,ಕೆಲಕಾಲ ಟ್ರಾಫಿಕ್ ಸಮಸ್ಯೆ ಉಂಟಾಯಿತು.

ಎಲ್ಲೆಂದರಲ್ಲಿ ಗುಂಡಿಗಳು ಬಿದ್ದಿರುವುದರಿಂದ ಸಮಸ್ಯೆಗಳ ಸಂಖ್ಯೆ ದಿನದಿಂದ ದಿನಕ್ಕೆ ವೃದ್ಧಿಸುತ್ತಿದ್ದು,ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಬೇಕಿದೆ.

Edited By : Nirmala Aralikatti
Kshetra Samachara

Kshetra Samachara

23/10/2020 12:57 pm

Cinque Terre

40.05 K

Cinque Terre

24

ಸಂಬಂಧಿತ ಸುದ್ದಿ