ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಪತ್ತು ನಿರ್ವಹಣಾ ಕಾರ್ಯಾಗಾರ:ನಿಮ್ಮ ರಕ್ಷಣೆ ನಿಮ್ಮ ಕೈಯಲ್ಲಿ

ಹುಬ್ಬಳ್ಳಿ: ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸಹಯೋಗದಲ್ಲಿಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಾಗಾರವನ್ನು ಹುಬ್ಬಳ್ಳಿಯಲ್ಲಿ ಹಮ್ಮಿಕೊಳ್ಳಲಾಯಿತು.

ವಿಪತ್ತಿನ ಸಂದರ್ಭದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಸಂದಿಗ್ಧ ಸಂದರ್ಭದಲ್ಲಿ ಏನೆಲ್ಲ ನಿಯಮಗಳನ್ನು ಅನುಸರಿಸಬೇಕು ಎಂಬುವ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಯಿತು.

ಎಂಬತ್ತಕ್ಕೂ ಹೆಚ್ಚು ಕಾರ್ಯಕರ್ತರು ವಿಪತ್ತು ನಿರ್ವಹಣಾ ತರಬೇತಿ ಪಡೆದುಕೊಂಡಿದ್ದು,ಜಲಪ್ರವಾಹ, ಅಗ್ನಿ ಅವಘಡ ಹಾಗೂ ಇನ್ನಿತರ ಅಹಿತಕರ ಘಟನೆಗಳು ಸಂಭವಿಸಿದ ಸಂದರ್ಭದಲ್ಲಿ ಮಾಡಬೇಕಾದ ಕ್ರಮಗಳನ್ನು ಅಧಿಕಾರಿಗಳು ಪ್ರಾತ್ಯಕ್ಷಿಕೆ ಮೂಲಕ ಪ್ರಸ್ತುತ ಪಡಿಸಿದರು.

ಅಗ್ನಿಶಾಮಕ ಇಲಾಖೆ ಅಧಿಕಾರಿಗಳಾದ ವಿನಾಯಕ ಹತ್ತೇಕರ,ಚಂದ್ರಕಾಂತ ಹಾಗೂ ಪ್ರವೀಣಕುಮಾರ್ ಡಿ.ಎಮ್ ನೇತೃತ್ವದಲ್ಲಿ ಕಾರ್ಯಾಗಾರ ನಡೆಸಲಾಯಿತು.

Edited By : Nagaraj Tulugeri
Kshetra Samachara

Kshetra Samachara

30/10/2020 07:43 pm

Cinque Terre

38.65 K

Cinque Terre

0

ಸಂಬಂಧಿತ ಸುದ್ದಿ