ಕುಂದಗೋಳ : ಪಟ್ಟಣದ ಪಶು ಆಸ್ಪತ್ರೆ ಆವರಣದಲ್ಲಿ ಕೋಲ್ ಇಂಡಿಯಾ ಲಿಮಿಟೆಡ್ ಸಿ.ಎಸ್.ಆರ್ ಅಡಿಯಲ್ಲಿ ನೂತನ 98.70 ಲಕ್ಷ ವೆಚ್ಚದ ನೂತನ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಇಡೀ ರಾಜ್ಯದ ತಾಲೂಕು ವಲಯಗಳಲ್ಲೇ 98.70 ಲಕ್ಷ ವೆಚ್ಚದ ವೆಚ್ಚದ ಪಶು ಆಸ್ಪತ್ರೆ ನಿರ್ಮಾಣ ಆಗುತ್ತಿರುವುದು ಇದೇ ಮೊದಲು ಎಂದರು. ಕಾರ್ಯಕ್ರಮದ ಸಂದರ್ಭ ಸ್ಥಳದಲ್ಲಿದ್ದ ಕೋಲ್ ಇಂಡಿಯಾ ಲಿಮಿಟೆಡ್ ಅಧಿಕಾರಿಗಳ ಉತ್ತಮ ಕಟ್ಟಡ ನಿರ್ಮಿಸುವ ಜವಾಬ್ದಾರಿ ಬಗ್ಗೆ ತಿಳಿಸಿ ಈ ಪಶು ಆಸ್ಪತ್ರೆಯಲ್ಲಿ ಇರುವ ವೈದ್ಯಾಧಿಕಾರಿಗಳ ಕೊರತೆ ನೀಗಿಸುವ ಭರವಸೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡರ ಜಿಲ್ಲಾ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಬಸವರಾಜ ಕುಂದಗೋಳಮಠ, ಬಿಜೆಪಿ ಮುಖಂಡ ಎಮ್.ಆರ್.ಪಾಟೀಲ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪೃಥ್ವಿರಾಜ್ ಕಾಳೆ, ರವಿಗೌಡ ಪಾಟೀಲ ಇತರರು ಉಪಸ್ಥಿತರಿದ್ದರು.
Kshetra Samachara
01/11/2020 10:32 am