ಧಾರವಾಡ: ಅಂಗನವಾಡಿ ಕೇಂದ್ರಗಳ ಮೂಲಕ ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ಕಳಪೆಮಟ್ಟದ ಆಹಾರ ಧಾನ್ಯ ಪೂರೈಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಮತಾ ಸೇನೆ ಸದಸ್ಯರು ಧಾರವಾಡದ ಸಮಗ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಅಂಗನವಾಡಿ ಕೇಂದ್ರಗಳಿಂದ ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ನೀಡುವೆ ರವೆ, ಹಿಟ್ಟು, ಧಾನ್ಯಗಳು ಸಂಪೂರ್ಣ ಕಳಪೆಮಟ್ಟದ್ದಾಗಿವೆ. ಅವುಗಳನ್ನು ದನಗಳೂ ಸಹ ತಿನ್ನುವುದಿಲ್ಲ. ಅಂತಹ ಆಹಾರ ಧಾನ್ಯಗಳನ್ನು ಪೂರೈಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ಈ ಬಗ್ಗೆ ಪ್ರತಿಭಟನಾನಿರತ ದಿವಾನ್ ಬಳ್ಳಾರಿ ಪ್ರತಿಕ್ರಿಯೆ ನೀಡಿದ್ದು.
ಈ ರೀತಿಯ ಕಳಪೆ ಆಹಾರ ಧಾನ್ಯ ಪೂರೈಕೆಯಾಗುತ್ತಿದ್ದು, ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
Kshetra Samachara
03/11/2020 01:46 pm