ಅಣ್ಣಿಗೇರಿ: ಪಟ್ಟಣದ ಶಾರದಾ ಕಾಲನಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಕುಡಿಯುವ ನೀರು ಸ್ಥಗಿತಗೊಂಡು ವರ್ಷ ಕಳೆದರೂ ಕೂಡಾ ಶುದ್ಧವಾಗಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಈ ಶುದ್ಧ ಕುಡಿಯುವ ನೀರಿನ ಘಟಕ ನೂತನವಾಗಿ ಆರಂಭವಾದಾಗ ಕೇವಲ ಒಂದು ತಿಂಗಳು ಮಾತ್ರ ಕಾರ್ಯನಿರ್ವಹಿಸಿರುತ್ತದೆ. ಅಲ್ಲಿಂದ ಇಲ್ಲಿಯವರೆಗೂ ಹನಿ ನೀರನ್ನು ಈ ಘಟಕ ನೀಡಿಲ್ಲ ಎಂದು ಸ್ಥಳೀಯರು ದೂರಿದರು. ನೀರು ಬರದೇ ಇರುವುದಕ್ಕೆ ಕಳಪೆ ಕಾಮಗಾರಿಯೇ ಕಾರಣವಾಗಿದೆ ಮತ್ತು ಅಧಿಕಾರಿಗಳ ಹಾಗೂ ಗುತ್ತಿಗೆದಾರನ ಕೈವಾಡದಿಂದ ಹಣ ಪೋಲಾಗಿದೆ. ಶುದ್ಧ ಎಂಬುದು ನೆಪ ಮಾತ್ರ. ಆದ್ರೆ ಈ ಅಶುದ್ಧ ಕುಡಿಯುವ ನೀರಿನ ಘಟಕವನ್ನು ಕಳಪೆಯಾಗಿ ನಿರ್ಮಿಸಲಾಗಿದೆ. ಈ ಕೂಡಲೇ ಸಂಬಂದಿಸಿದ ಅಧಿಕಾರಿಗಳು ಈ ಶುದ್ಧ ಕುಡಿಯುವ ನೀರಿನ ಘಟಕದ ಕಾಮಗಾರಿಯಲ್ಲಿ ಅವ್ಯವಹಾರ ಎಸಗಿದ ಅಧಿಕಾರಿ ಹಾಗೂ ಗುತ್ತಿಗೆದಾರನಿಗೆ ತಕ್ಕ ಪಾಠ ಕಲಿಸಿ ಸ್ಥಳೀಯರಿಗೆ ಶುದ್ಧಕುಡಿಯುವ ನೀರನ್ನು ನೀಡಬೇಕೆಂದು ಸ್ಥಳೀಯರು ಪಬ್ಲಿಕ್ ನೆಕ್ಸ್ಟ್ ಮೂಲಕ ಮನವಿ ಮಾಡಿದ್ದಾರೆ.
Kshetra Samachara
03/11/2020 04:26 pm