ಧಾರವಾಡ: ಸ್ಮಶಾನಕ್ಕೆ ಭೂಮಿ ನೀಡಬೇಕು ಎಂದು ಆಗ್ರಹಿಸಿ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದ ಜನ ಬುಧವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಖಾಸಗಿ ವ್ಯಕ್ತಿಯೊಬ್ಬರ ಜಮೀನಿನಲ್ಲಿ ಇಷ್ಟು ದಿನ ಶವ ಸಂಸ್ಕಾರ ಮಾಡಲಾಗುತ್ತಿತ್ತು. ಈಗ ಆ ಜಮೀನಿನವರು ತಕರಾರು ತೆಗೆದಿದ್ದು, ಯಾರಾದರೂ ತೀರಿಕೊಂಡರೆ ಶವ ಸಂಸ್ಕಾರ ಮಾಡಲು ಸ್ಥಳಾವಕಾಶ ಇಲ್ಲದಾಗಿದೆ. ಹೀಗಾಗಿ ಜಿಲ್ಲಾಧಿಕಾರಿಗಳು ಮುತುವರ್ಜಿ ವಹಿಸಿ ಸ್ಮಶಾನಕ್ಕೆ ಸ್ಥಳದ ವ್ಯವಸ್ಥೆ ಮಾಡಿಸಿಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
Kshetra Samachara
04/11/2020 03:09 pm