ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಸರಳ,ತ್ವರಿತ ಭೂಸ್ವಾಧೀನ ಪ್ರಕ್ರಿಯೆಗೆ ಮುಂದಾದ ಜಿಲ್ಲಾಡಳಿತ:ಸ್ಥಳದಲ್ಲಿಯೇ ಪರಿಹಾರ ಒದಗಿಸಿದ ಜಿಲ್ಲಾಧಿಕಾರಿ

ಧಾರವಾಡ : ಇಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಇಟಿಗಟ್ಟಿ ಗ್ರಾಮಕ್ಕೆ ತೆರಳಿ ಇಟಿಗಟ್ಟಿ ಹಾಗೂ ಗಾಮನಗಟ್ಟಿ ಪ್ರದೇಶದಲ್ಲಿ ನೂತನವಾಗಿ ಸ್ಥಾಪಿಸಲು ಉದ್ದೇಶಿಸಿರುವ ಕೈಗಾರಿಕೆ ಪ್ರದೇಶಕ್ಕೆ ಅಗತ್ಯವಿರುವ ಸುಮಾರು 587 ಎಕರೆ ಭೂಮಿಯನ್ನು ರೈತರಿಂದ ಪಡೆಯುವ ಕಾರ್ಯವನ್ನು ಸರಳ ಮತ್ತು ತ್ವರಿತಗೊಳಿಸುವ ಪ್ರಕ್ರಿಯೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಇಟಿಗಟ್ಟಿ ಗ್ರಾಮದಲ್ಲಿ 97 ರೈತರಿಗೆ ಸೇರಿದ ಸುಮಾರು 473 ಎಕರೆ ಜಮೀನನ್ನು ಕೈಗಾರಿಕೆ ಸ್ಥಾಪನೆ ಉದ್ದೇಶಕ್ಕೆ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಪ್ರತಿ ಎಕರೆಗೆ 55 ಲಕ್ಷ ರೂ.ಗಳಂತೆ ಈಗಾಗಲೇ 11 ಜನ ರೈತರಿಂದ 30 ಎಕರೆ 36 ಗುಂಟೆ ಜಮೀನು ಖರೀದಿಸಿ 14.51 ಕೋಟಿ ರೂ ಪಾವತಿಸಲಾಗಿದೆ. ಗಾಮನಗಟ್ಟಿ ಗ್ರಾಮ ವ್ಯಾಪ್ತಿಯಲ್ಲಿಯೂ ಸಹ 21 ರೈತರಿಗೆ ಸೇರಿದ 114 ಎಕರೆ 35 ಗುಂಟೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ಗುರುತಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ಇಂದು ನೇರವಾಗಿ ರೈತರ ಬಳಿ ತೆರಳಿದ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ರೈತರಿಂದ ಭೂಮಿಯ ದಾಖಲೆಗಳು, ಬ್ಯಾಂಕ್ ಖಾತೆ ಪುಸ್ತಕ, ನಷ್ಟಪೂರ್ತಿ ಕಾಗದ (Indemnity Bond), ಒಪ್ಪಂದ ದಾಖಲೆ ( Agreement Bond) , ಆಧಾರ್ ಕಾರ್ಡ, ಭಾವಚಿತ್ರಗಳು ಸೇರಿದಂತೆ ಅಗತ್ಯ ದಾಖಲೆಗಳನ್ನು ಪಡೆಯಲಾಯಿತು.

Edited By : Manjunath H D
Kshetra Samachara

Kshetra Samachara

13/10/2020 05:31 pm

Cinque Terre

15.25 K

Cinque Terre

1

ಸಂಬಂಧಿತ ಸುದ್ದಿ