ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್; ಆರೇಕುರಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ತಹಶೀಲ್ದಾರ್

ನವಲಗುಂದ : ತಾಲ್ಲೂಕಿನ ಆರೇಕುರಹಟ್ಟಿ ಗ್ರಾಮದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದ ಬೆಳೆ ಸಂಪೂರ್ಣ ನಾಶವಾದ ಬಗ್ಗೆ ಈಗಾಗಲೇ ನಿಮ್ಮ ಪಬ್ಲಿಕ್ ನೆಕ್ಸ್ಟ್ ಶುಕ್ರವಾರದಂದು ಸುದ್ದಿಯನ್ನು ಬಿತ್ತರಿಸಿತ್ತು. ಇದಕ್ಕೆ ಫಲಶ್ರುತಿ ಎಂಬಂತೆ ಇಂದು ನವಲಗುಂದ ತಹಶೀಲ್ದಾರ್ ನವೀನ ಹುಲ್ಲೂರ ಅವರು ಸ್ಥಳಕ್ಕೆ ಭೇಟಿ ನೀಡಿ, ಹಾನಿಗೋಳಗಾದ ಜಮೀನುಗಳನ್ನು ಪರಿಶೀಲನೆ ನಡೆಸಿದರು.

ಹೌದು ಆರೇಕುರಹಟ್ಟಿ ಗ್ರಾಮದಲ್ಲಿ ಸುಮಾರು 200 ಕ್ಕೂ ಹೆಚ್ಚು ಜಮೀನುಗಳಿಲ್ಲಿ ಬೆಳೆದ ಕಡಲೆ, ಗೋವಿನ ಜೋಳ, ಸೂರ್ಯಪಾನ, ಗೋದಿ, ಜೋಳ ಕುಸುಬೆ ಸಂಪೂರ್ಣ ನಾಶವಾಗಿದ್ದು, ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ನೆನ್ನೆಯಷ್ಟೇ ಸುದ್ದಿಯನ್ನು ಬಿತ್ತರಿಸಿತ್ತು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ, ಹಾನಿಗೋಳಗಾದ ಜಮೀನುಗಳನ್ನು ಪರಿಶೀಲನೆ ನಡೆಸಿದರು. ಇನ್ನು ಮಂಗಳವಾರ ಪಿ ಡಿ ಓ, ಇ ಓ, ಎ ಡಿ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

Edited By : Nagesh Gaonkar
Kshetra Samachara

Kshetra Samachara

27/11/2021 04:45 pm

Cinque Terre

60.84 K

Cinque Terre

1

ಸಂಬಂಧಿತ ಸುದ್ದಿ