ಹುಬ್ಬಳ್ಳಿ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರೈತರ ಸಂಘದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಿಂದ ಚೆನ್ನಮ್ಮ ವೃತ್ತದವರೆಗೆ ಟ್ರಾಕ್ಟರ್ ಮುಖಾಂತರ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದ ಅನ್ನದಾತರು, ಮಹಾದಾಯಿ ಕಾಮಗಾರಿ ಪೂರ್ಣಗೊಳಿಸಬೇಕು. ಬಗರಹುಕಂ ಕಾಯ್ದೆ ಅಡಿಯಲ್ಲಿ ರೈತರಿಗೆ ಹಕ್ಕುಪತ್ರ ನೀಡಬೇಕು ಅಲ್ಲದೇ ಬೆಳೆ ವಿಮೆ ಪರಿಹಾರ ಸಂದಾಯ ಮಾಡುವಂತೆ ಒತ್ತಾಯಿಸಿದರು. ಕೃಷಿ ಕೂಲಿ ಕಾರ್ಮಿಕರ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡುವಂತೆ ಘೋಷಣೆ ಕೂಗಿ ಆಗ್ರಹಿಸಿದ ರೈತರು, 2018-19ರ ಸಾಲ ಮನ್ನಾ ಮಾಡುವ ಮೂಲಕ ಯೋಜನೆಯ ಫಲಾನುಭವಿ ರೈತರ ಬಾಕಿ ಹಣ ಸಂದಾಯ ಮಾಡಬೇಕು ಎಂದು ಒತ್ತಾಯಿಸಿದರು.
Kshetra Samachara
08/08/2022 03:28 pm