ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: 'ಕಬ್ಬಿನ ದರ ಹೆಚ್ಚಿಸದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸತ್ಯಾಗ್ರಹ'

ಕಲಘಟಗಿ: ಹಳಿಯಾಳ ಸಕ್ಕರೆ ಕಾರ್ಖಾನೆಯವರು ರೈತರ ಕಬ್ಬಿಗೆ ಎಫ್‌ಆರ್‌ಪಿ ದರ ಆದಷ್ಟು ಬೇಗನೆ ನಿಗದಿ ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಸತ್ಯಾಗ್ರಹ ಮಾಡಲಾಗುವುದು ಎಂದು ಬಿಜೆಪಿ ಮುಖಂಡ ಶಶಿಧರ ನಿಂಬಣ್ಣವರ ಹೇಳಿದ್ದಾರೆ.

ಕಲಘಟಗಿ ತಾಲ್ಲೂಕಿನ ದಾಸ್ತಿಕೊಪ್ಪ ಗ್ರಾಮದ ಹತ್ತಿರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಕರೆದು ಮಾತನಾಡಿ, 'ಅತಿವೃಷ್ಟಿ ಮಳೆಯಿಂದ ಗೋವಿನ ಜೋಳ, ಸೋಯಾಬಿನ ಬೆಳೆ ನೆಲ ಕಚ್ಚಿ ಹಾಳಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಮಳೆಯಿಂದಾಗಿ ಕಬ್ಬಿನ ಬೆಳೆ ಇಳುವರಿ ಕಡಿಮೆಯಾಗಿದ್ದು, ಬೆಲೆ ಕೂಡ ಕಡಿಮೆ ಮಾಡಿದರೆ ರೈತರ ಮೇಲೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ ಎಂದರು.

ಧಾರವಾಡ ಜಿಲ್ಲಾಧಿಕಾರಿಗಳು ಹಳಿಯಾಳ ಸಕ್ಕರೆ ಕಾರ್ಖಾನೆ ಮಾಲೀಕರ ತುರ್ತು ಸಭೆ ಕರೆದು ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಸೂಚನೆ ನೀಡಬೇಕು. ನಿಗದಿತ ಸಮಯದಲ್ಲಿ ಕನಿಷ್ಠ ಬೆಂಬಲ ಘೋಷಣೆ ಮಾಡದಿದ್ದರೆ ಕಲಘಟಗಿಯ ನೂರಾರು ರೈತರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದರು.

ವರದಿ: ಉದಯ ಗೌಡರ

Edited By :
Kshetra Samachara

Kshetra Samachara

07/10/2022 09:58 pm

Cinque Terre

44.46 K

Cinque Terre

2

ಸಂಬಂಧಿತ ಸುದ್ದಿ